ಗಣಿ : ಲೋಕಾಯುಕ್ತ ತನಿಖೆಗೆ ಸರಕಾರ ಸಿದ್ಧ
ಬೆಂಗಳೂರು,
ಜು. 14 : ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಾಧ್ಯವಿಲ್ಲ. ಅದರ ಬದಲಾಗಿ ಪ್ರಕರಣದ ಸಂಪೂರ್ಣ ತನಿಖೆಯನ್ನು ಲೋಕಾಯುಕ್ತ ಇಲಾಖೆಯಿಂದ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. id="toptextpromo">ಮಾಧ್ಯಮ
ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷಗಳು ಲೋಕಾಯುಕ್ತ ತನಿಖೆಗೆ ಸಹಕರಿಸಬೇಕು. ವಿಧಾನಸಭೆಯಲ್ಲಿ ಧರಣಿಯನ್ನು ಕೈಬಿಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆಯಲ್ಲಿ ಎಲ್ಲ ಪಕ್ಷದ ಪಾಲೂ ಇದೆ. ಕಾಂಗ್ರೆಸ್ ನ ಅನೇಕ ಮುಖಂಡರು ಅವರ ಸಂಬಂಧಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದರು. id='are-slot-1' class='oiad oi-axt oiadv'> id='top-searched-articles'>ಪ್ರಕರಣವನ್ನು
ಸಿಬಿಐ ತನಿಖೆಗೆ ಒಪ್ಪಿಸುವುದರಿಂದ ಸರಿಯಲ್ಲ. ಕಾಂಗ್ರೆಸ್ ಮುಖಂಡರೂ ಪ್ರಕಕಣದಲ್ಲಿ ಬಾಗಿಯಾಗಿದ್ದರಿಂದ ಸಿಬಿಐ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸಲು ಸರಕಾರ ರೆಡಿಯಾಗಿದೆ. ಲೋಕಾಯುಕ್ತ ತನಿಖೆಗೆ ಕಾಂಗ್ರೆಸ್ ಮುಖಂಡರು ವಿರೋಧಿಸುತ್ತಿರುವುದಾದರೂ ಏಕೆ ಎಂದು ಯಡಿಯೂರಪ್ಪ ಪ್ರಶ್ನಿಸಿದರು.











Click it and Unblock the Notifications