ಅಧಿಕಾರಿಗಳು ತೋಡಿದ ಹಳ್ಳಕ್ಕೆ ಬಿದ್ದ ಯಡ್ಡಿ
ಬೆಂಗಳೂರು,
ಜು. 16 : ಅಧಿಕಾರಿಗಳು ನೀಡಿದ ತಪ್ಪು ಮಾಹಿತಿಯಿಂದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು ಹಿರಿಯ ಕಾಂಗ್ರೆಸ್ಸಿಗ ಆರ್ ಎಲ್ ಜಾಲಪ್ಪ ಅವರ ವಿರುದ್ಧ ಅಕ್ರಮ ಗಣಿಗಾರಿಕೆಯ ಆರೋಪ ಮಾಡಿದ್ದೇನೆ. ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಕ್ಷಮೆಯಾಚಿಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. id="toptextpromo">ಜಾಲಪ್ಪ
ಅವರ ಅಳಿಯ ಮತ್ತು ದೇಶಪಾಂಡೆ ಅವರ ಮಗ ಗಣಿಗಾರಿಕೆಗೆ ಅರ್ಜಿ ಹಾಕಿದ್ದರು. ಆದರೆ, ಅವರಿಗೆ ಅನುಮತಿ ಸಿಕ್ಕಿಲ್ಲ. ಅಧಿಕಾರಿಗಳು ತಪ್ಪು ಮಾಹಿತಿ ನೀಡಿ ವಿಧಾನ ಪರಿಷತ್ ನಲ್ಲಿ ಸುಳ್ಳು ಹೇಳಿಸಿದ್ದಾರೆ ಎಂದು ಯಡಿಯೂರಪ್ಪ ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು. ಬುಧವಾರ ರಾತ್ರಿ ಜಾಲಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕ್ಷಮಿಸಿಬಿಡಿ ಎಂದು ಮನವಿ ಮಾಡಿಕೊಂಡಿದ್ದೇನೆ. ಈಗ ಮಾಧ್ಯಮಗಳ ಮೂಲಕ ಸಾರ್ವಜನಿಕವಾಗಿ ಕ್ಷಮೆ ಕೋರುತ್ತಿದ್ದೇನೆ ಎಂದರು. id='are-slot-1' class='oiad oi-axt oiadv'> id='top-searched-articles'>ಎಸ್
ಎಂ ಕೃಷ್ಣ ಅಧಿಕಾರ ಅವಧಿಯಿಂದ ಇಲ್ಲಿಯವರೆಗೆ ಯಾರೆಲ್ಲಾ ಗಣಿಗಾರಿಕೆಯಲ್ಲಿ ತೊಡಗಿದ್ದಾರೆ ಎನ್ನುವ ವಿವರಗಳನ್ನು ಪುಸ್ತಕ ರೂಪದಲ್ಲಿ ಹೊರತರಲಾಗುವುದು ಎಂದು ಯಡಿಯೂರಪ್ಪ ಹೇಳಿದರು. ಸುಳ್ಳು ಆರೋಪಕ್ಕೆ ಸಂಬಂಧಿಸಿದಂತೆ ಜಾಲಪ್ಪ ಮತ್ತು ದೇಶಪಾಂಡೆ ಇಬ್ಬರೂ ಮುಖ್ಯಮಂತ್ರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದರು.











Click it and Unblock the Notifications