ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

12ನೇ ತರಗತಿ ವಿದ್ಯಾರ್ಥಿನಿ ಟ್ಯೂಶನ್ ಕ್ಲಾಸ್ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಸಮಯದಲ್ಲಿ ಕಾರಿನಲ್ಲಿ ಬಂದ ಮೂವರು ಯುವಕರು ವಿದ್ಯಾರ್ಥಿನಿಗೆ ಪಿಸ್ತೂಲು ತೋರಿಸಿ ಅಪಹರಣ ಮಾಡಿದ್ದಾರೆ. ನಂತರ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಆಕೆಯನ್ನು ಆಕೆಯ ಮನೆಯ ಸಮೀಪದಲ್ಲಿ ಬಿಟ್ಟು ಹೋಗಿದ್ದಾರೆ.
ಬುಧವಾರವೇ ಈ ಕೃತ್ಯ ನಡೆದಿದ್ದು, ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಮೊದಲು ನಿರಾಕರಿಸಿದ್ದಾರೆ. ನಂತರ ವಿದ್ಯಾರ್ಥಿನಿಯ ತಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಕೆ ವರ್ಮಾ ಅವರನ್ನು ಭೇಟಿ ಮಾಡಿ ಘಟನೆ ವಿವರಿಸಿದ ನಂತರ ಪ್ರಕರಣವನ್ನು ಗುರುವಾರ ದಾಖಲಿಸಿಕೊಳ್ಳಲಾಗಿದೆ.
ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ವಿದ್ಯಾರ್ಥಿನಿಯನ್ನು ವೈದ್ಯಕೀಯ ತಪಾಸಣೆ ಕಳುಹಿಸಲಾಗಿದೆ. ವೈದ್ಯಕೀಯ ವರದಿ ಬಂದ ನಂತರ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವರ್ಮಾ ವಿವರಿಸಿದ್ದಾರೆ. ಆದರೆ, ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ.












Click it and Unblock the Notifications