ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಚ್1ಎನ್1 : ಭಯಬೀಳುವ ಅಗತ್ಯವಿಲ್ಲ

By * ಕೆಆರ್ ಸೋಮನಾಥ್, ಶಿವಮೊಗ್ಗ
|
Google Oneindia Kannada News

ಶಿವಮೊಗ್ಗ, ಜು.19 : ಜಿಲ್ಲೆಯಲ್ಲಿ ಎಚ್1ಎನ್1 ರೋಗ ಹರಡದಂತೆ ಜಿಲ್ಲಾಡಳಿತ ಎಲ್ಲಾ ರೀತಿಯ ಮುಂಜಾಗ್ರತೆ ಕ್ರಮವನ್ನು ತೆಗೆದುಕೊಂಡಿದ್ದು, ಜನರು ರೋಗದ ಬಗ್ಗೆ ಭಯ ಬೀಳುವ ಅಗತ್ಯವಿಲ್ಲ ಎಂದು ಪ್ರಭಾರ ಜಿಲ್ಲಾಧಿಕಾರಿ ಎ.ಬಿ.ಹೇಮಚಂದ್ರ ತಿಳಿಸಿದ್ದಾರೆ.

ಸೋಮವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್1ಎನ್1 ರೋಗ ಹರಡದಂತೆ ತಡೆಕಟ್ಟುವ ಸಲುವಾಗಿ ಯಾವ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ವೈದ್ಯರುಗಳ ಸಭೆ ಕರೆದು ಚರ್ಚಿಸಲಾಗಿದೆ. ಹಾಗೆಯೇ, ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಒಂದು ವಾರ್ಡ್‌ನ್ನು ಎಚ್1ಎನ್1 ರೋಗ ಬಂದವರಿಗೆ ಚಿಕಿತ್ಸೆ ನೀಡಲು ಮೀಸಲಿಡಲಾಗಿದೆ. ಜೊತೆಗೆ ನಂಜಪ್ಪ ಆಸ್ಪತ್ರೆಯಲ್ಲಿಯೂ ಹತ್ತು ಹಾಸಿಗೆ ಒಂದು ವಾರ್ಡ್‌ನ್ನು ಇಂದು ಸಂಜೆಯಿಂದಲೇ ಮೀಸಲಿಡಲು ಸೂಚಿಸಲಾಗಿದೆ ಎಂದರು.

ಮುಖ್ಯವಾಗಿ ಎಚ್1ಎನ್1 ರೋಗದ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಮೊದಲು ಅವರ ಮನಸ್ಸಿನಲ್ಲಿರುವ ಭಯಬಿಡಬೇಕು. ಆ ನಿಟ್ಟಿನಲ್ಲಿ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಪ್ರಚಾರ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ನಗರಸಭೆ ಎಲ್ಲಾ ಶಾಲಾ-ಕಾಲೇಜುಗಳು, ತಾಲ್ಲೂಕಿನ ಎಲ್ಲಾ ವೈದ್ಯರುಗಳನ್ನು ಸಜ್ಜುಗೊಳಿಸಲಾಗಿದ್ದು, ಎಚ್1ಎನ್1ಗೆ ಸಂಬಂಧಿಸಿದ ಔಷಧಿ ಸಂಪೂರ್ಣ ಮಾಹಿತಿ ಲಭ್ಯವಿದ್ದು, ಎಲ್ಲಾ ಆಸ್ಪತ್ರೆಗಳಿಗೂ ಸರಬರಾಜು ಮಾಡಲಾಗಿದೆ ಎಂದು ತಿಳಿಸಿದರು.

ಕಳೆದ ಬಾರಿ ಇದಕ್ಕೆ ಬೇಕಾದಂತಹ ಔಷಧಿಯ ಕೊರತೆ ಇದೆ ಎಂಬ ದೂರು ಕೇಳಿಬಂದಿತ್ತು. ಆದರೆ ಈ ಬಾರಿ ಔಷಧಿ ಸಾಕಷ್ಟು ಲಭ್ಯವಿದೆ ಎಂದ ಅವರು, ಜಿಲ್ಲೆಯಲ್ಲಿ ಡೆಂಗ್ಯೂ ಜ್ವರವನ್ನು ತಡೆಹಿಡಿಯಲು ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಆಸ್ಪತ್ರೆಗಳಿಗೂ ಸೂಚನೆ ನೀಡಲಾಗಿದೆ ಎಂದರು.

ಗೋಷ್ಠಿಯಲ್ಲಿ ಆರೋಗ್ಯ ಅಧಿಕಾರಿ ಮಾತನಾಡಿ, ಜಿಲ್ಲೆಯಲ್ಲಿ ಎಚ್1ಎನ್1 ರೋಗಕ್ಕೆ ಸಂಬಂಧಿಸಿದಂತೆ ಇದುವರೆಗೂ 4 ಕೇಸುಗಳು ದಾಖಲಾಗಿದ್ದು, ಅದರಲ್ಲಿ 2 ಪ್ರಕರಣದಲ್ಲಿ ಎಚ್1ಎನ್1 ರೋಗ ಇರುವುದು ದೃಢಪಟ್ಟಿದೆ. ಇನ್ನೆರಡು ಪ್ರಕರಣದಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಹಾಗೆಯೇ, ಇನ್ನೂ ಎರಡು ಪ್ರಕರಣಗಳು ನೇರವಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಗುಣಮುಖರಾಗಿದ್ದು, ಇನ್ನಿಬ್ಬರು ಮೃತಪಟ್ಟಿರುವುದಾಗಿ ತಿಳಿಸಿದರು.

ಹಂದಿಜ್ವರ : ಹೊಟೇಲ್ ತಿಂಡಿಯಿಂದ ದೂರವಿರಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X