ಕಂದಾಯ ನಿರೀಕ್ಷಕನ ಬರ್ಬರ ಹತ್ಯೆ
ಮಂಡ್ಯ,
ಜು. 19 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ನಿರೀಕ್ಷಕ ಸತೀಶ್ ಎಂಬುವವರನ್ನು ಭೀಕರವಾಗಿ ಹತ್ಯೆಗೈಯಲಾಗಿದೆ. ಸತೀಶ್ ಅವರ ಶವ ಭಾನುವಾರ ಸಂಜೆ ನಗರದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. id="toptextpromo">ಮೈಸೂರು-ಬೆಂಗಳೂರು
ಹೆದ್ದಾರಿಯಲ್ಲಿ ಇರುವ ಪೆಟ್ರೋಲ್ ಪಂಪ್ ಬಳಿ ಕಾರು ಶನಿವಾರ ಮಧ್ಯಾಹ್ನದಿಂದಲೇ ನಿಂತಿತ್ತು. ಮಾಹಿತಿ ಆಧರಿಸಿ ಪೊಲೀಸರು ತಪಾಸಣೆ ನಡೆಸಿದಾಗ ಕೊಲೆ ಆಗಿರುವುದು ಪತ್ತೆಯಾಗಿದೆ. ಕೈಕಾಲುಗಳನ್ನು ಕಟ್ಟಿ ಹಾಕಲಾಗಿದೆ. ಇದು ಕೊಲೆ ಪ್ರಕರಣ ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಯಾವುದೇ ಹೆಚ್ಚುವರಿ ಮಾಹಿತಿ ಲಭ್ಯವಾಗಿಲ್ಲ. id='are-slot-1' class='oiad oi-axt oiadv'> id='top-searched-articles'>ತನಿಖೆ
ಆರಂಭವಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಒಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.











Click it and Unblock the Notifications