ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋಹತ್ಯೆ ನಿಷೇಧ ವಿರೋಧಿ ಗೌಡ್ರ ಪ್ರತಿಕೃತಿ ದಹನ

By * ರೋಹಿಣಿ, ಬಳ್ಳಾರಿ
|
Google Oneindia Kannada News

Hindu Jagaran Vedike Protest over Devegowda
ಬಳ್ಳಾರಿ,ಜು. 20: ಗೋಸಂರಕ್ಷಣೆ ಮಸೂದೆಗೆ ರಾಜ್ಯಪಾಲರು ಸಹಿ ಹಾಕಬಾರದು ಎಂದು ರಾಜಭವನದ ಮೇಲೆ ಒತ್ತಡ ಹೇರುತ್ತಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪ್ರತಿಕೃತಿಯನ್ನು ಬಳ್ಳಾರಿಯ ಹಿಂದೂ ಜಾಗರಣ ವೇದಿಕೆ ದಹಿಸಿ ಆಕ್ರೋಶ ವ್ಯಕ್ತಪಡಿಸಿತು.

ಬಳ್ಳಾರಿ ನಗರದ ಗಡಿಗೆ ಚೆನ್ನಪ್ಪ ವೃತ್ತದಲ್ಲಿ ಸೋಮವಾರ ಬೆಳಗ್ಗೆ ಸಭೆ ಸೇರಿದ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು, ಎಚ್.ಡಿ. ದೇವೇಗೌಡರ ವಿರುದ್ಧ ಘೋಷಣೆಗಳನ್ನು ಕೂಗಿದರು. ಮತ್ತು ಪ್ರತಿಕೃತಿಯನ್ನು ದಹನ ಮಾಡಿದರು.

ವೇದಿಕೆಯ ರಾಜ್ಯ ಕಾರ್ಯದರ್ಶಿ ಎಂ.ಡಿ. ಅನಿಲ್‌ನಾಯ್ಡು ಈ ಸಭೆಯ ನೇತೃತ್ವವಹಿಸಿ ಮಾತನಾಡಿ, ಗೋಸಂರಕ್ಷಣೆ ಮಸೂದೆಯನ್ನು ಕಾಯಿದೆಯಾಗಿ ಜಾರಿಗೆ ತರಲು ಹಿಂದೂಗಳು ಮತ್ತು ಕೃಷಿಕರ ಸಂಪೂರ್ಣ ಬೆಂಬಲ ಇದೆ. ಆದರೆ, ಕಾಂಗ್ರೆಸ್ - ಜೆಡಿಎಸ್ ರಾಜಕೀಯ ದುರುದ್ದೇಶಗಳಿಗಾಗಿ ವಿರೋಧಿಸುತ್ತಿವೆ ಎಂದು ಆರೋಪಿಸಿದರು.

ರಾಜ್ಯಪಾಲ ಹಂಸರಾಜ್ ಭಾರಧ್ವಜ್ ಅವರು ರಾಜಕಾರಣಿಗಳ ಒತ್ತಡಕ್ಕೆ ಬಲಿ ಆಗಬಾರದು. ದೇಶದ ಸಂಸ್ಕೃತಿ ಮತ್ತು ಇತಿಹಾಸದ ಸಂರಕ್ಷಣೆಗಾಗಿ ಗೋ ಹತ್ಯೆ ನಿಷೇಧ ಕಾಯಿದೆ ಜಾರಿ ಆಗಬೇಕು ಎಂದು ಅವರು ಆಗ್ರಹಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X