ಉಗ್ರಪ್ಪನವರೇ ನಾಲಿಗೆ ಬಿಗಿ ಹಿಡಿದು ಮಾತಾಡಿ

ಬುಧವಾರ ಮಾಧ್ಯಮಗೋಷ್ಠಿ ನಡೆಸಿದ ಧನಂಜಯಕುಮಾರ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬ ಬೇಲೇಕೇರಿ ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಭಾಗಿಯಾಗಿದೆ ಎಂಬ ಉಗ್ರಪ್ಪ ಅವರ ಹೇಳಿಕೆಯನ್ನು ನಿರಾಕರಿಸಿದ್ದು, ತೀವ್ರವಾಗಿ ಖಂಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಉಗ್ರಪ್ಪ ಅವರ ವರ್ತನೆ ಹದ್ದುಮೀರಿದೆ. ಸರಕಾರದ ವಿರುದ್ದ ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ತೀವ್ರ ಅಕ್ರೋಶ ವ್ಯಕ್ತಪಡಿಸಿದರು. ಅವರ ವರ್ತನೆ ಹೀಗೆ ಮುಂದುವರೆದರೆ, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಹಿಂಜರಿಯುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕ ವೇದಿಕೆ ಸಿಕ್ಕರೆ ಉಗ್ರಪ್ಪ ಅವರ ಮಾತುಗಳು ಮೇರೆಯನ್ನು ಮೀರುತ್ತವೆ. ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬೇಲೇಕೇರಿ ಅದಿರು ಪ್ರಕರಣದಲ್ಲಿ ವಿನಾಕಾರಣ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಕುಟುಂಬವನ್ನು ಎಳೆದು ತರುತ್ತಿರುವುದು ಖಂಡನೀಯ ಕೆಲಸ.
ಪ್ರಕರಣವನ್ನು ಈಗಾಗಲೇ ಲೋಕಾಯುಕ್ತಕ್ಕೆ ವಹಿಸಲಾಗಿದೆ. ತನಿಖೆ ನಡೆದು ವರದಿ ಬಂದ ನಂತರ ಯಾರು ಭಾಗಿಯಾಗಿದ್ದಾರೆ ಎನ್ನುವುದು ತಿಳಿದುಬರಲಿದೆ. ಅದಕ್ಕೂ ಮುಂಚಿತವಾಗಿ ಉಗ್ರಪ್ಪ ತಮಗೆ ತಿಳಿದಂತೆ ಮಾತನಾಡುವುದು ಸರಿಯಲ್ಲ. ಕೆಪಿಸಿಸಿ ಅಧ್ಯಕ್ಷ ದೇಶಪಾಂಡೆ ಅವರು ಉಗ್ರಪ್ಪ ಅವರ ಬಾಯಿ ಬೀಗ ಹಾಕಿದರೆ ಉತ್ತಮ ಎಂದು ಧನಂಜಯಕುಮಾರ ಕಿವಿಮಾತು ಹೇಳಿದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications