ಸಿಬಿಐ ತನಿಖೆಗೆ ವಹಿಸುವವರೆಗೂ ಹೋರಾಟ

ಮೈಸೂರು ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ, ಅಕ್ರಮ ಅದಿರು ರಫ್ತು ಹಾಗೂ ಅಂತಾರಾಷ್ಟ್ರೀಯ ವಿಷಯಗಳಿಗೆ ಸಂಬಂಧಪಟ್ಟಿರುವುದರಿಂದ ಸಿಬಿಐ ತನಿಖೆಗೆ ವಹಿಸುವುದು ಸೂಕ್ತ. ಸಿಬಿಐ ತನಿಖೆಯಿಂದ ಸತ್ಯಾಂಷ ಹೊರಬರಲಿದೆ ಎಂದು ಸಿದ್ಧರಾಮಯ್ಯ ಪ್ರತಿಪಾದಿಸಿದರು.
ಅಕ್ರಮ ಗಣಿಗಾರಿಕೆ ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಜನಜಾಗೃತಿ ಮೂಡಿಸಲು ಕಾಂಗ್ರೆಸ್ ಪಕ್ಷ ಬೆಂಗಳೂರಿನಿಂದ ಬಳ್ಳಾರಿವರೆಗೆ ಕೈಗೊಂಡಿರುವ ಪಾದಯಾತ್ರೆ ಸಂದರ್ಭದಲ್ಲಿ ಏನೇ ಆನಾಹುತ ಸಂಭವಿಸಿದರೂ ಸಚಿವರು ಮತ್ತು ಸರಕಾರ ನೇರ ಹೊಣೆ ಎಂದು ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ ಪಕ್ಷ ಪಾದಯಾತ್ರೆ ನಡೆಸಿಯೇ ತೀರುತ್ತದೆ. ಯಾವ ಬೆದರಿಕೆಗೂ ಬಗ್ಗಲ್ಲ. ರೆಡ್ಡಿ ಹೆಸರಿಸಿರುವ ಕಾಂಗ್ರೆಸ್ ನಾಯಕರು ಗಣಿಗಾರಿಕೆಯೂ ಸಿಬಿಐತನಿಖೆಯಾಗಲಿ. ಒಟ್ಟಿನಲ್ಲಿ ಇತಿಹಾಸ ದೊಡ್ಡ ಹಗರಣವಾಗಿರುವ ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ವಹಿಸಲೇಬೇಕು ಎಂದು ಸಿದ್ಧರಾಮಯ್ಯ ಆಗ್ರಹಿಸಿದರು.











Click it and Unblock the Notifications