ಗೋಹತ್ಯೆ ಮಾಡಿದರೆ ಏಳು ವರ್ಷ ಸಜೆ
ಭೋಪಾಲ್,
ಜು. 22 : ಇತ್ತೀಚೆಗೆ ಕರ್ನಾಟಕ ಸರಕಾರ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಿದೆ. ಇದೀಗ ಬಿಜೆಪಿ ಆಡಳಿತದಲ್ಲಿರುವ ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ್ ರಾಜ್ಯಗಳೂ ಗೋಹತ್ಯೆ ನಿಷೇಧದ ಜೊತೆಗೆ ಶಿಕ್ಷೆಯ ಪ್ರಮಾಣವನ್ನೂ ಪ್ರಕಟಿಸಿವೆ. id="toptextpromo">ಈಗಾಗಲೇ
ಮಧ್ಯಪ್ರದೇಶದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಆದರೆ, ಗೋಹತ್ಯೆ ಮಾಡುವವರ ವಿರುದ್ಧ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿರಲಿಲ್ಲ. ಈ ಕಾಯ್ದೆಗೆ ಇದೀಗ ತಿದ್ದುಪಡಿ ತರಲಾಗಿದ್ದು, ಗೋಹತ್ಯೆ ಮಾಡುವವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು. ಜೊತೆಗೆ 5,000 ದಂಡವನ್ನು ಸಹ ವಿಧಿಸಲಾಗುವುದು ಎಂದು ಶಿವರಾಜ್ ಸಿಂಗ್ ಚವಾಣ್ ಸರಕಾರ ಘೋಷಿಸಿದೆ. id='are-slot-1' class='oiad oi-axt oiadv'> id='top-searched-articles'>ಅಲ್ಲದೆ
ಹಸು ಮಾಲೀಕರು ಹಸುವನ್ನು ಒಂದಡೆಯಿದ ಮತ್ತೊಂದಡೆಗೆ ಸಾಗಿಸಬೇಕಾದರೆ ಅನುಮತಿ ಪಡೆಯಬೇಕು. 30 ದಿನದೊಳಗೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸರಕಾರ ಹೇಳಿದೆ. ಛತ್ತೀಸ್ ಗಢ್ ದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಛತ್ತೀಸ್ ಗಢ್ ದ ಮುಖ್ಯಮಂತ್ರಿ ರಮಣ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.











Click it and Unblock the Notifications