ಪ್ರಾಂಶುಪಾಲನಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Crimebeat
ಹೈದರಾಬಾದ್, ಜು. 22 : ಹನ್ನೊಂದನೇ ತರಗತಿಯ ವಿದ್ಯಾರ್ಥಿನಿಯೊಬ್ಬಳನ್ನು ಕಾಲೇಜಿನ ಪ್ರಾಶುಂಪಾಲನೆ ಹಲವು ಬಾರಿ ಅತ್ಯಾಚಾರ ಎಸಗಿರುವ ಘಟನೆ ಹೈದರಾಬಾದ್ ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿ ಇದೀಗ ಗರ್ಭೀಣಿಯಾಗಿರುವ ಸಂಗತಿಯೂ ಹೊರಬಿದ್ದಿದ್ದು, ಪೋಷಕರು ತೀವ್ರ ಆತಂಕಗೊಂಡಿದ್ದಾರೆ.

ವಿದ್ಯಾರ್ಥಿನಿ ಮುಂಬೈ ಮೂಲದವಳಾಗಿದ್ದಾಳೆ. ಹೈದರಾಬಾದ್ ನ ಹೊರವಲಯದ ಮನ್ನೇಗುಡ್ಡದ ಬಳಿ ಇರುವ ಪಾರ್ಕ್ ವುಡ್ ಇಂಟರ್ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲ ಸಲಾವುದ್ಧೀನ್ ಅಯೂಬ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಗರ್ಭೀಣಿ ಮಾಡಿರುವ ಆರೋಪಿ. ಈತನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದು, ಅತ್ಯಾಚಾರ ಎಸಗಿರುವ ಬಗ್ಗೆ ಆರೋಪಿಯನ್ನ ತನಿಖೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಜೆ ಸತ್ಯನಾರಾಯಣ ತಿಳಿಸಿದ್ದಾರೆ.

ಆದರೆ, ಕಾಲೇಜಿನ ಆಡಳಿತ ಮಂಡಳಿ ಅತ್ಯಾಚಾರ ಪ್ರಕರಣವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಕಾಲೇಜಿಗೆ ಮಸಿ ಬಳಿಯುವ ಕೆಲಸ ಇದಾಗಿದೆ ಎಂದು ಹೇಳಿದೆ. ಅಲ್ಲದೇ ನಮ್ಮ ಕಾಲೇಜಿನ ಶಾಖೆ ಮಧ್ಯಪ್ರಾಚ್ಯ ದೇಶದಲ್ಲಿದೆ. ಕಾಲೇಜಿಗೆ ಕೆಟ್ಟ ಹೆಸರು ತರಬೇಕು ಎಂಬ ಉದ್ದೇಶದಿಂದ ಮಾಡಿರುವ ಸಂಚು ಇದಾಗಿದೆ ಎಂದು ಹೇಳಿದೆ.

ಕಳೆದ ಒಂದು ವರ್ಷದಿಂದ ನಮ್ಮ ಮಗಳ ಮೇಲೆ ನಿರಂತರವಾಗಿ ಸಲಾವುದ್ಧೀನ್ ಅತ್ಯಾಚಾರ ಎಸಗಿದ್ದಾನೆ. ಈ ಸಂಗತಿಯನ್ನು ಯಾರಿಗಾದರೂ ಹೇಳಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂಬ ಬೆದರಿಕೆಯನ್ನೂ ಹಾಕಿದ್ದಾನೆ. ಇದೀಗ ಮಗಳು ಗರ್ಭೀಣಿಯಾಗಿದ್ದಾಳೆ ಎಂದು ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಾಂಶುಪಾಲನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಪೋಷಕರು, ಮಹಿಳಾ ಸಂಘಟನೆಗಳು ಕಾಲೇಜಿನ ಎದುರು ಪ್ರತಿಭಟನೆ ಆರಂಭಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+