ರೆಡ್ಡಿಗಳ ಕೈಗೊಂಬೆ ಯಾಗಿರುವ ಸಿಎಂ

H Vishwanath
ಮೈಸೂರು, ಜು.23: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಳ್ಳಾರಿ ಗಣಿ ಧಣಿಗಳ ಕೈ ಗೊಂಬೆಯಾಗಿದ್ದಾರೆರೆಡ್ಡಿ ಸಹೋದರರು ತಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಕುತಂತ್ರ ನಡೆಸಿದ್ದಾರೆ ಎಂದು ಸಂಸದ ಎಚ್. ವಿಶ್ವನಾಥ್ ಟೀಕಿಸಿದ್ದಾರೆ.

ಸಿಎಂ ಗಣಿ ಹಗರಣವನ್ನು ಸಿಬಿಐಗೆ ಒಪ್ಪಿಸದಂತೆ ರೆಡ್ಡಿ ಸಹೋದರರು ಒತ್ತಡ ಹೇರುತ್ತಿದ್ದಾರೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ದೂರಿದರು. ರಾಜ್ಯದಲ್ಲಿ ರೆಡ್ಡಿ ಸಹೋದರರು ಮತ್ತು ಶ್ರೀರಾಮುಲು ಅವರ ದಬ್ಬಾಳಿಕೆ ಹೆಚ್ಚಾಗಿದೆ. ಇಡೀ ರಾಜ್ಯವನ್ನು ತಮ್ಮ ಕಪಿ ಮುಷ್ಠಿಯಲ್ಲಿ ಇಟ್ಟು ಕೊಳ್ಳಲು ಹವಣಿಸುತ್ತಿದ್ದಾರೆ.ಇದಕ್ಕೆ ರಾಜ್ಯದ ಜನತೆ ಅವಕಾಶ ನೀಡುವುದಿಲ್ಲ.

ಗಣಿ ಧಣಿಗಳ ವರ್ತನೆಯನ್ನು ಗಮನಿಸುತ್ತಿರುವ ಜನತೆ ಮುಂದಿನ ದಿನಗಳಲ್ಲಿ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಭವಿಷ್ಯ ನುಡಿದರು.

ತಾವು ಅಪರಂಜಿ ಎಂದು ಕರೆದುಕೊಳ್ಳುತ್ತಿರುವ ರೆಡ್ಡಿ ಸಹೋದರರು ಹಾಗೂ ಮಖ್ಯಮಂತ್ರಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲುಹಿಂದೇಟು ಹಾಕುತ್ತಿರುವುದಾದರೂ ಏಕೆ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಆರ್ಥಿಕ ಸ್ಥಿತಿ ಮತ್ತು ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದರು.

ಕಾಂಗ್ರೆಸ್ ನಾಯಕರೂ ಸಹ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವ ಕುರಿತು ಸಚಿವ ಜನಾರ್ದನ ರೆಡ್ಡಿ ಆರೋಪಿಸಿರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಕೂಡಲೇ 2000ನೇ ಇಸವಿಯಿಂದಲೇ ನಡೆಸಿದ ಗಣಿಗಾರಿಕೆ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಆದೇಶಿಸಲಿ, ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷದ ನಾಯಕರು ತಪ್ಪು ಮಾಡಿದ್ದರೆ ಜೈಲಿಗೆ ಕಳುಹಿಸಲಿ ಎಂದು ಅವರು ಸವಾಲು ಹಾಕಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+