ಕೇಂದ್ರದಿಂದ ಸಿಬಿಐ ದುರುಪಯೋಗ : ಅನಂತಕುಮಾರ
ಬೆಂಗಳೂರು,ಜು.
26 : ಕೇಂದ್ರದ ಆಡಳಿತ ಪಕ್ಷದ ಅನುಕೂಲಕ್ಕೆ ತಕ್ಕಂತೆ ಸಿಬಿಐ ಸಂಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಸಂಸದ ಅನಂತಕುಮಾರ ಟೀಕಿಸಿದ್ದಾರೆ. id="toptextpromo">ಕಾರ್ಯಕ್ರಮವೊಂದರಲ್ಲಿ
ಭಾಗವಹಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸಿಬಿಐ ಸಂಸ್ಥೆಯನ್ನು ಕೇಂದ್ರ ಸರಕಾರ ಯಾವ ರೀತಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಮುಲಾಯಂ ಸಿಂಗ್ ಯಾದವ್, ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಗುಜರಾತ್, ಬಿಹಾರ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ಸಿಬಿಐ ಸಂಸ್ಥೆಯನ್ನು ಹೇಗೆ ಬಳಸಿಕೊಳ್ಳಲಾಗಿದೆ ಎಂಬುದನ್ನು ಜನತೆ ಮುಂದಿಡಲಿ ಎಂದು ಅವರು ಆಗ್ರಹಿಸಿದರು. id='are-slot-1' class='oiad oi-axt oiadv'> id='top-searched-articles'>ಅಕ್ರಮ
ಗಣಿಗಾರಿಕೆಯನ್ನು ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ಅವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವರೆಂಬ ವಿಶ್ವಾಸವಿದೆ. ಆದರೆ, ಕಾಂಗ್ರೆಸ್ ನಡೆಸುತ್ತಿರುವುದು ಪಾದಯಾತ್ರೆ ಅಲ್ಲ, ತೀರ್ಥಯಾತ್ರೆ. ಇದರಿಂದ ಸರಕಾರಕ್ಕೆ ಯಾವ ತೊಂದರೆಯೂ ಆಗುವುದಿಲ್ಲ ಎಂದು ಅನಂತಕುಮಾರ ಹೇಳಿದರು.











Click it and Unblock the Notifications