ಸಿಬಿಐ : ಕಾಂಗ್ರೆಸ್ ಬ್ಯೂರೋ ಆಫ್ ಇನ್ ವೆಸ್ಟಿಗೇಷನ್ ಅಲ್ಲ
ನವದೆಹಲಿ,
ಜು. 26 : ಸಿಬಿಐ ಸ್ವತಂತ್ರ ಸಂಸ್ಥೆಯೇ ಹೊರತು ಕಾಂಗ್ರೆಸ್ ಬ್ಯೂರೋ ಆಫ್ ಇನ್ ವೆಸ್ಟಿಗೇಷನ್ ಅಲ್ಲ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. id="toptextpromo">ಸೋಹ್ರಾಬುದ್ದಿನ್
ನಕಲಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಗುಜರಾತ್ ನ ಮಾಜಿ ಗೃಹ ಸಚಿವ ಅಮಿತ್ ಶಾ ಪ್ರಕರಣಕ್ಕೆ ಆಕ್ರೋಶಗೊಂಡಿರುವ ಬಿಜೆಪಿ ನಾಯಕರು, ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರಕಾರ ತಮ್ಮ ಎದುರಾಳಿಗಳ ವಿರುದ್ಧ ಸಿಬಿಐ ಸಂಸ್ಥೆಯನ್ನು ಅಕ್ರಮವಾಗಿ ಬಳಸಿಕೊಳ್ಳತೊಡಗಿದೆ ಎಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಕಿಡಿಕಾರಿದ್ದರು. id='are-slot-1' class='oiad oi-axt oiadv'> id='top-searched-articles'>ಇದಕ್ಕೆ
ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಸಿಬಿಐ ಸಂಸ್ಥೆಯ ಮೇಲೆ ಕೇಂದ್ರ ಸರಕಾರ ಯಾವುದೇ ಒತ್ತಡ ಹೇರಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ ಹೊರತು ಆಡಳಿತ ಪಕ್ಷದ ಕೈವಾಡವಿಲ್ಲ. ತಪ್ಪು ಮುಚ್ಚಿಕೊಳ್ಳಲು ಪ್ರತಿಪಕ್ಷದ ನಾಯಕರು ವಿನಾಕಾರಣ ಸರಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಸಿಬಿಐ ಮೇಲೆ ಯಾವುದೇ ಒತ್ತಡ ತಂದಿಲ್ಲ. ತರುವ ಪ್ರಶ್ನೆಯೇ ಇಲ್ಲ ಎಂದು ಸಿಂಗ್ ವಿವರಿಸಿದರು.











Click it and Unblock the Notifications