ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಾಧ್ವಿ ಪ್ರಗ್ಯಾ

ನ್ಯಾಯಮೂರ್ತಿ ಜೆ.ಎಂ.ಪಾಂಚಾಲ್ ಹಾಗೂ ಗ್ಯಾನ್ ಸುಧಾ ಮಿಶ್ರಾ ಅವರನ್ನೊಳಗೊಂಡ ಪೀಠ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ. ಈ ಹಿಂದೆ ಜಾಮೀನು ಕೋರಿ ಪ್ರಗ್ಯಾ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಮಾ.12ರಂದು ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಪ್ರಗ್ಯಾ ಪರ ವಕೀಲ ಸುಶೀಲ್ ಬಲ್ವಾಡ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ದಾಖಲಿಸಿದ್ದಾರೆ.
ಮುಂಬೈ ಹೈಕೋರ್ಟ್ ಆದೇಶವನ್ನು ಪ್ರಗ್ಯಾ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆಂದು ಬಲ್ವಾಡ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಸಾಧ್ವಿ ಸೇರಿದಂತೆ ಹಲವರ ವಿರುದಟಛಿ ವಿಶೇಷ ಕಾನೂನಿನಡಿ ದಾಖಲಾಗಿದ್ದ ಆರೋಪಗಳನ್ನು ತಳ್ಳಿ ಹಾಕಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಮುಂಬೈ ನ್ಯಾಯಾಲಯ ಇತ್ತೀಚೆಗಷ್ಟೇ ರದ್ದುಗೊಳಿಸಿತ್ತು.
ಸದ್ಯ ನಾಸಿಕ್‌ನ ಕೇಂದ್ರೀಯ ಕಾರಾಗೃಹದಲ್ಲಿ ಪ್ರಗ್ಯಾಸಿಂಗ್ ಶಿಕ್ಷೆ ಅನುಭವಿಸುತ್ತಿದ್ದಾರೆ. 2008ರ ಸೆ.29 ರಂದು ಮಾಲೇಗಾಂವ್‌ನಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ 7 ಜನರು ಸಾವನ್ನಪ್ಪಿದ್ದರು.












Click it and Unblock the Notifications