ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳ : ಮುಸ್ಲಿಂ ರಾಜ್ಯವಾಗಿಸಲು ಪಿಎಫ್ಐ ಹುನ್ನಾರ

By Mrutyunjaya Kalmat
|
Google Oneindia Kannada News

Kerala CM Achuthanandan
ತಿರುವನಂತಪುರಂ, ಜು. 27 : ಮುಂದಿನ 20 ವರ್ಷಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಸಂಘಟನೆ ಕೇರಳವನ್ನು ಮುಸ್ಲಿಂ ರಾಜ್ಯವನ್ನಾಗಿ ಮಾಡಲು ಹುನ್ನಾರ ನಡೆಸುತ್ತಿದೆ ಎಂಬ ವಿವಾದಾತ್ಮಕ ಹೇಳಿಕೆಯೊಂದನ್ನು ಕೇರಳ ಮುಖ್ಯಮಂತ್ರಿ ವಿ ಎಸ್ ಅಚ್ಯುತಾನಂದನ್ ನೀಡಿದ್ದಾರೆ.

ಪ್ರಶ್ನೆ ಪತ್ರಿಕೆಯಲ್ಲಿ ಪ್ರವಾದಿ ಪೈಗಂಬರರನ್ನು ಅವಮಾನ ಮಾಡಿದ ಎನ್ನುವ ಕಾರಣಕ್ಕೆ ಮುಸ್ಲಿಂ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಕಾರ್ಯಕರ್ತರು ಕಾಲೇಜಿನ ಉಪನ್ಯಾಸಕರೊಬ್ಬರ ಕೈಕತ್ತರಿಸಿದ್ದು ಭಾರಿ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಇದರಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಮುಖ್ಯಮಂತ್ರಿ ಅಚ್ಯುತಾನಂದನ್, ಪ್ರಕರಣದ ಸಮಗ್ರ ತನಿಖೆಗೆ ಆದೇಶ ನೀಡಿದ್ದರು.

ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಅವರು, ಪಿಎಫ್ಐ ಸಂಘಟನೆ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸತೊಡಗಿದೆ. ಹಿಂದೂ ಯುವಕರಿಗೆ ಆಸೆ ಆಮಿಷ ತೋರಿಸಿ, ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿ ನಂತರ ಮುಸ್ಲಿಂ ಸಂಪ್ರದಾಯದಂತೆ ಮುಸ್ಲಿಂ ಯುವತಿಯೊಂದಿಗೆ ಮದುವೆ ಮಾಡುತ್ತಿದೆ. ಮುಂದಿನ 20 ವರ್ಷಗಳಲ್ಲಿ ಭಾರತವನ್ನು ಮುಸ್ಲಿಂ ರಾಷ್ಟ್ರವನ್ನಾಗಿಸುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದ್ದರು.

ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ವಿರೋಧದ ಮದ್ಯೆಯೂ ಅಚ್ಯುತನಂದನ್ ತಮ್ಮ ಹೇಳಿಕೆಗೆ ಬದ್ಧವಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X