ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳದಲ್ಲಿ ಕೈ ಕೋಳ ವಿವಿಧೆಡೆ ಕರವೇ ಪ್ರತಿಭಟನೆ

By Mahesh
|
Google Oneindia Kannada News

Koppal incidence Karave protest
ಸವಣೂರು/ಬೆಂಗಳೂರು,ಜು.28: ಕೊಪ್ಪಳದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರ ಮೇಲಿನ ಹಲ್ಲೆ ಹಾಗೂ ಅವರಿಗೆ ಬೇಡಿ ತೊಡಿಸಲಾಗಿರುವ ಘಟನೆಗೆ ಸವಣೂರಿನಲ್ಲಿ ಪ್ರತಿಧ್ವನಿ ವ್ಯಕ್ತವಾಗಿದೆ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲೂ ಕರವೇ ಅಧ್ಯಕ್ಷ ನಾರಾಯಣಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

ಡಿಜಿಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ನಂತರ ಗೃಹ ಸಚಿವ ವಿಎಸ್ ಆಚಾರ್ಯ ಹಾಗೂ ಡಿಜಿಪಿ ಅಜಯ್ ಕುಮಾರ್ ಸಿಂಹ ಅವರನ್ನು ಭೇಟಿ ಮಾಡಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

ಸವಣೂರಿನಲ್ಲೂ ಪ್ರತಿಭಟನೆ: ಕರ್ನಾಟಕ ರಕ್ಷಣಾ ವೇದಿಕೆಯ ಕೊಪ್ಪಳ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಮೇಲೆ ಪೊಲೀಸರು ಹಲ್ಲೆ ನಡೆಸಿರುವುದು ಖಂಡನೀಯ ಎಂದು ತಿಳಿಸಿರುವ ತಾಲೂಕ್ ಅಧ್ಯಕ್ಷ ಮ್ಲಲಾರೆಪ್ಪ ತಳ್ಳಿಹಳ್ಳಿ, ಸರಕಾರ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆಯನ್ನು ಹತ್ತಿಕ್ಕಲು ಮುಂದಾಗಿದೆ. ಕನ್ನಡದ ಸೇವಕರ ಕೈಗಳಿಗೆ ಸರಕಾರಿ ಬೇಡಿ ತೊಡಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸವಣೂರಿನ ಭರಮಲಿಂಗೇಶ್ವರ ವೃತ್ತದಲ್ಲಿ ಮಂಗಳವಾರ ರಾತ್ರಿ 8 ಗಂಟೆಗೆ ಟೈರ್‌ಗಳಿಗೆ ಬೆಂಕಿ ಹಚ್ಚಿದ ಕ.ರ.ವೇ ಕಾರ್ಯಕರ್ತರು, ವ್ಯವಸ್ಥೆಯ ವಿರುದ್ದ ಘೋಷಣೆಗಳನ್ನು ಕೂಗಿ ಪ್ರತಿರೋಧ ವ್ಯಕ್ತಪಡಿಸಿದರು.

ಘಟನೆ ಹಿನ್ನೆಲೆ : ಕೊಪ್ಪಳ ನಗರದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 63 ರಸ್ತೆ ಅಗಲೀಕರಣದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ಕರವೇ ವಿರೋಧ ವ್ಯಕ್ತಪಡಿಸಿತ್ತು. ಶ್ರೀಮಂತರ ಹಿತಕ್ಕಾಗಿ ಈ ಯೋಜನೆ ಕೈಗೊಳ್ಳಲಾಗಿದೆ ಎಂದು ಕರವೇ ಪ್ರತಿಭಟನೆ ನಡೆಸಿತ್ತು. ಈ ಸಂದರ್ಭದಲ್ಲಿ ಕನ್ನಡಪರ ಕಾರ್ಯಕರ್ತರಿಗೆ ಕೈಕೋಳ ತೊಡಿಸಿ ಪೊಲೀಸರು ಎಳೆದೊಯ್ದಿದ್ದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X