ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಟಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ : ರಾಮುಲು

By * ರೋಹಿಣಿ, ಬಳ್ಳಾರಿ
|
Google Oneindia Kannada News

Suvarna Arogya Chaitanya to cover 1cr students ,SriRamulu
ಬಳ್ಳಾರಿ.ಆ.2:'ಸುವರ್ಣ ಆರೋಗ್ಯ ಚೈತನ್ಯ' ಕಾರ್ಯಕ್ರಮದಡಿ 1 ರಿಂದ 10 ನೇ ತರಗತಿಯವರೆಗಿನ ರಾಜ್ಯದ 1 ಕೋಟಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆಯನ್ನು ಆಗಸ್ಟ್ 1 ರಿಂದ 30 ರವರೆಗೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಬಾಲ ಭಾರತಿ ಶಾಲೆಯಲ್ಲಿ ಭಾನುವಾರ ನಡೆದ 'ಸುವರ್ಣ ಆರೋಗ್ಯ ಚೈತನ್ಯ' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯವು ತನ್ನ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ಆರೋಗ್ಯ ಹಾಗೂ ಶಿಕ್ಷಣ ಇಲಾಖೆಗಳ ಸಹಯೋಗದೊಂದಿಗೆ 2006-07 ರಿಂದ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಪಲ್ಸ್ ಪೊಲಿಯೋ ಕಾರ್ಯಕ್ರಮದ ಮಾದರಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಯಶಸ್ವಿನಿ ನೆಟ್ ವರ್ಕ್: ಕಳೆದ ಶೈಕ್ಷಣಿಕ ವರ್ಷದಲ್ಲಿ 82,44,843 ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದರು.ಗಂಭೀರ ಸ್ವರೂಪದ ಕಾಯಿಲೆಯಿಚಿದ ಗುರುತಿಸಲ್ಪಟ್ಟ ವಿದ್ಯಾರ್ಥಿಗಳಿಗೆ ಈ ಯೋಜನೆ ಅಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ನೀಡಲಾಗುತ್ತದೆ. ಕಳೆದ ವರ್ಷ ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದ 2072 ವಿದ್ಯಾರ್ಥಿಗಳಿಗೆ, ಪ್ರಸಕ್ತ ವರ್ಷದಲ್ಲಿ 446 ವಿದ್ಯಾರ್ಥಿಗಳಿಗೆ ಉಚಿತವಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

ಶಸ್ತ್ರ ಚಿಕಿತ್ಸೆಗೆ ಹೋಗುವ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪ್ರಯಾಣ ವೆಚ್ಚವಾಗಿ ಒಂದು ಸಾವಿರ ರೂ. ನೀಡಲಾಗುವುದು ಎಂದರು. ಬಳ್ಳಾರಿ ಜಿಲ್ಲೆಯಲ್ಲಿ ಈ ವರ್ಷ 4,13,706 ಮಕ್ಕಳನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗುವುದು.

ಕಳೆದ ವರ್ಷ 4,00,361 ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಗಿದೆ. 65 ವಿದ್ಯಾರ್ಥಿಗಳಿಗೆ ಸಂಭೀರ ಸ್ವರೂಪದ ಕಾಯಿಲೆಗಳಿಗೆ ಶಸ್ತ್ರ ಚಿಕಿತ್ಸೆ ನೀಡಸಲಾಗಿದೆ. 1600 ಶಸ್ತ್ರ ಚಿಕಿತ್ಸೆಗಳು ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆಗಳು ಈ ಯೋಜನೆಯಡಿ ಲಭ್ಯವಿರುತ್ತವೆ. ಈ ಯೋಜನೆಯನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡರೆ ಏಕಾಗ್ರತೆ, ಸದೃಡತೆ ಮತ್ತು ಮಾನಸಿಕ ವಿಕಾಸವಾಗುತ್ತದೆ. ವಿದ್ಯಾರ್ಥಿಗಳು ಗುರು ಹಿರಿಯರು, ತಂದೆ ತಾಯಿಗಳನ್ನು ಗೌರವಿಸಬೇಕು. ಶಿಕ್ಷಣಕ್ಕಾಗಿ ಸಾಕಷ್ಟು ಯೋಜನೆಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆದು ಉದ್ಯೋಗಸ್ತರಾಗಬೇಕು. ಈ ನಿಟ್ಟಿನಲ್ಲಿ ಮುಂದಾದರೆ ಭವಿಷ್ಯ ಉತ್ತಮವಾಗಿರುತ್ತದೆ ಎಂದು ತಿಳಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X