ಬೆಂಗಳೂರಿನ ನಕಲಿ ಲೋಕಾಯುಕ್ತ ಬಂಧನ
ಬಳ್ಳಾರಿ,
ಆ. 5: ತಾನು ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಸರ್ಕಾರಿ ನೌಕರರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ ಬೆಂಗಳೂರು ಮೂಲದ ನಕಲಿ ಅಧಿಕಾರಿಯನ್ನು ಜಿಲ್ಲಾ ಪೊಲೀಸರು ಮಂಗಳವಾರ ಬೆಂಗಳೂರಿನಲ್ಲಿ ಬಂಧಿಸಿ, ಬಳ್ಳಾರಿಯಲ್ಲಿ ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ. id="toptextpromo">ಬಂಧಿತ
ಆರೋಪಿ ಬೆಂಗಳೂರಿನ ಜೆಪಿ ನಗರ ನಿವಾಸಿ ಷಣ್ಮುಖಪ್ಪ (45). ಈತನು ಬಳ್ಳಾರಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಜೈಕುಮಾರ್ ಅವರಿಗೆ ದೂರವಾಣಿಯಲ್ಲಿ ಸಂಪರ್ಕಿಸಿ ತಾನು ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಹಣಕ್ಕಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ. ಹಣಕ್ಕಾಗಿ ಪೀಡಿಸುತ್ತಿದ್ದ ವ್ಯಕ್ತಿಯ ಮಾತುಗಳಿಂದ ಅನುಮಾನಪಟ್ಟ ಡಾ. ಜೈಕುಮಾರ್ ಪೊಲೀಸರಿಗೆ ದೂರು ನೀಡಿದ್ದರು. id='are-slot-1' class='oiad oi-axt oiadv'> id='top-searched-articles'>ಸಿಪಿಐ
ಹುಲ್ಲೂರು ನೇತೃತ್ವದ ತಂಡ ಮಂಗಳವಾರ ಬೆಂಗಳೂರಿಗೆ ತೆರಳಿ ಬೆಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಷಣ್ಮುಖನನ್ನು ಬಂಧಿಸಿ, ಆತನಿಂದ ಆಲ್ಟೋ ಕಾರ್, ಮೊಬೈಲ್ ಮತ್ತು 3 ಸಾವಿರ ರು. ನಗದನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಿಕೊಳ್ಳಲಾಗಿದ್ದು, ತನಿಖೆ ನಡೆದಿದೆ.











Click it and Unblock the Notifications