ಕಾಂಗ್ರೆಸ್ ಸತ್ತ ಪಕ್ಷ : ರಾಜನಾಥ್ ಸಿಂಗ್

ಕಾಂಗ್ರೆಸ್ ಪಾದಯಾತ್ರೆಗೆ ಪ್ರತಿಯಾಗಿ ಬಿಜೆಪಿ ನಗರದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಕರ್ನಾಟಕದಲ್ಲಿ ಬಿಜೆಪಿಯನ್ನು ಅಲುಗಾಡಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿಲ್ಲ. ಸೋನಿಯಾ ಗಾಂಧಿ, ರಾಹುಲ್ ಬಂದರೂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರಕ್ಕೆ ಏನೂ ಆಗದು ಎಂದು ಸಿಂಗ್ ವ್ಯಂಗ್ಯವಾಡಿದರು.
ಅಮಿತ್ ಶಾ ಅಮಾಯಕ : ನಕಲಿ ಎನ್ ಕೌಂಟರ್ ಆರೋಪ ಮೇಲೆ ಬಂಧಿತರಾಗಿರುವ ಗುಜರಾತಿನ ಮಾಜಿ ಗೃಹ ಸಚಿವ ಅಮಿತ್ ಶಾ ಅಮಾಯಕ ವ್ಯಕ್ತಿ. ಸಿಬಿಐಯನ್ನು ಕೇಂದ್ರ ಸರಕಾರ ದುರ್ಬಳಿಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ಮುಖಂಡ ರಾಜನಾಥ್ ಸಿಂಗ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಗುಜರಾತಿನಲ್ಲಿ ಬಿಜೆಪಿಯನ್ನು ಸೋಲಿಸಬೇಕು. ಈ ಮೂಲಕ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಮುಖಭಂಗಕ್ಕೆ ಈಡು ಮಾಡಬೇಕು ಎಂಬ ಏಕೈಕ ಉದ್ದೇಶ ಕಾಂಗ್ರೆಸ್ ಪಕ್ಷದ್ದಾಗಿದೆ. ಹೀಗಾಗಿ ಕೇಂದ್ರ ಸರಕಾರ ಸಿಬಿಐ ಸಂಸ್ಥೆಯನ್ನೇ ದುರ್ಬಳಿಕೆ ಮಾಡಿಕೊಂಡಿರುವುದು ಜಗತ್ತಿಗೆ ಗೊತ್ತಿದೆ ಎಂದು ಸಿಂಗ್ ಕಿಡಿಕಾರಿದರು. ಸೋಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣದಲ್ಲಿ ಅಮಿತ್ ಶಾ ಸಂಪೂರ್ಣ ನಿರಪರಾಧಿ ಎಂದು ಅವರು ಅತ್ಮವಿಶ್ವಾಸದಿಂದ ಹೇಳಿದರು.












Click it and Unblock the Notifications