ವಿಚ್ಛೇದನ : ಚೇತನ್ ಗೆ ಟಾಟಾ ಹೇಳಿದ ಜ್ವಾಲಾ

ಹೌದು ನಾನು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ನಿಜ. ಆದರೆ, ನಾನು ವಿವಾಹ ಬಂಧನದಿಂದ ಬೇರ್ಪಡಲು ಇತ್ತೀಚೆಗೆ ಹಬ್ಬಿರುವ ಗಾಳಿ ಸುದ್ದಿಯಿಂದಲ್ಲ. ಕ್ರಿಕೆಟಿಗ ಅಜರುದ್ದೀನ್ ಮತ್ತು ತಮ್ಮ ಮಧ್ಯೆ ಯಾವುದೇ ಸಂಬಂಧವಿಲ್ಲ. ನಾವಿಬ್ಬರು ಸ್ನೇಹಿತರು ಮಾತ್ರ ಎಂದು ಗುಟ್ಟಾ ಮೌನ ಮುರಿದಿದ್ದಾಳೆ.
ಅಜರುದ್ದೀನ್ ಮತ್ತು ನನ್ನ ಮಧ್ಯೆ ಇತ್ತೀಚೆಗೆ ಮಾಧ್ಯಮಗಳಲ್ಲಿ ವರದಿಯಾಗಿರುವ ಎಲ್ಲ ಸುದ್ದಿಗಳು ಶುದ್ಧ ಸುಳ್ಳು. ಆ ಬಗ್ಗೆ ನಾನು ಏನನ್ನೂ ಹೇಳಲಾರೆ. ಇದರಿಂದ ನನಗೆ ತುಂಬಾ ಬೇಸರವಾಗಿದೆ. ಜೊತೆಗೆ ನನ್ನ ಜೀವನದಲ್ಲಿ ಅಲ್ಲೋಕಲ್ಲೋಲ ಉಂಟಾಗಿದೆ ಎಂದು ಜ್ವಾಲಾ ಹೇಳಿದ್ದಾರೆ. ಬ್ಯಾಡ್ಮಿಂಟನ್ ಪಟು ಚೇತನ್ ಆನಂದ ಅವರಿಗೆ ವಿಚ್ಛೇದನ ನೀಡುವ ಕಾರಣವನ್ನು ನಂತರ ಮಾಧ್ಯಮಗಳಿಗೆ ವಿವರಿಸುವುದಾಗಿ ಅವರು ಹೇಳಿದ್ದಾರೆ.
ಉತ್ತರ ಪ್ರದೇಶದ ಮೊರಾದಾಬಾದ್ ನ ಕಾಂಗ್ರೆಸ್ ಸಂಸದ ಆಗಿರುವ ಮೊಹಮ್ಮದ್ ಅಜರುದ್ದೀನ್ ಮತ್ತು ಬಾಲಿವುಡ್ ನಟಿ ಹಾಗೂ ಸಲ್ಮಾನ್ ಖಾನ್ ಅವರ ಮಾಜಿ ಗೆಳತಿ ಸಂಗೀತಾ ಬಿಜಲಾನಿ ಅವರ 14 ವರ್ಷಗಳ ವೈವಾಹಿಕ ಜೀವನ ಅಂತ್ಯ ಕಾಣುವ ಸಾಧ್ಯತೆಗಳಿವೆ ಎಂದು ಮಿಡ್ ವೇ ವರದಿ ಮಾಡಿತ್ತು. 47ರ ಹರೆಯದ ಅಜರುದ್ದೀನ್ ಅವರು ಶೀಘ್ರದಲ್ಲಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಸಿದ್ದತೆಯಲ್ಲಿದ್ದಾರೆ.
26 ವರ್ಷದ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಅವರೊಂದಿಗೆ ಅಜರುದ್ಧೀನ್ ಡೇಟಿಂಗ್ ನಡೆಸುತ್ತಿರುವುದು ಗುಟ್ಟಾಗೇನೂ ಉಳಿದಿಲ್ಲ. ಅಜರುದ್ದೀನ್ ಹೈದರಾಬಾದ್ ನಲ್ಲಿದ್ದರೆ, ಪುಲ್ಲೇಲು ಗೋಪಿಚಂದ್ ಅವರ ತರಬೇತಿ ಬಳಿ ಠಿಕಾಣಿ ಹೂಡುತ್ತಾರೆ ಎಂಬ ಗುಲ್ಲು ದೇಶದ ತುಂಬೆಲ್ಲಾ ಹರಿದಾಡಿತ್ತು. ತರಬೇತಿ ಕೇಂದ್ರದಲ್ಲಿ ಜ್ವಾಲಾ ಗುಟ್ಟಾ ಬ್ಯಾಡ್ಮಿಂಟನ್ ತರಬೇತಿ ಪಡೆಯುತ್ತಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications