ಮೌಂಟ್ ಕಾರ್ಮೆಲ್ ವಿದ್ಯಾರ್ಥಿನಿ ನಿಗೂಢ ಮರಣ

ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಎಂಎಸ್ಸಿ ಪ್ರಥಮ ವರ್ಷದ ಓದುತ್ತಿದ್ದ ರುಚಿಕಾ ಸುರೇಂದ್ರ ಪಾಲ್ ಸಿಂಗ್(22) ಮೃತಪಟ್ಟ ವಿದ್ಯಾರ್ಥಿನಿ. ಸಂಜಯ ನಗರದಲ್ಲಿ ಸೋದರಿಯೊಂದಿಗೆ ರುಚಿಕಾ ವಾಸವಿದ್ದರು. ಈಕೆಯ ಪೋಷಕರು ಗುಜರಾತಿನಲ್ಲಿದ್ದಾರೆ.
ಮಂಗಳವಾರ ಬೆಳಗ್ಗೆ ಕಾಲೇಜಿಗೆ ಬಂದು ಪಾಠ ಕೇಳುತ್ತಿದ್ದಾಗಲೇ ಬೆಂಚಿನಿಂದ ಬಿದ್ದಿದ್ದಾರೆ. ಕಾಲೇಜಿನ ಉಪನ್ಯಾಸಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರೊಳಗಾಗಿಯೇ ಆಕೆಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಇದು ಆತ್ಮಹತ್ಯೆ ಇಲ್ಲವೇ ಸಹಜ ಸಾವೇ ಎನ್ನುವುದು ತಿಳಿದು ಬಂದಿಲ್ಲ. ಹೃದಯಾಘಾತವಾಗಿರುವ ಶಂಕೆ ವ್ಯಕ್ತವಾಗಿದ್ದರೂ ವಿದ್ಯಾರ್ಥಿನಿಯ ಮರಣೋತ್ತರ ಪರೀಕ್ಷೆ ನಂತರವೇ ನಿಜಾಂಶ ಗೊತ್ತಾಗಲಿದೆ ಎಂದು ಮಹಾವೀರ್ ಜೈನ್ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಹೈಗೌಂಡ್ಸ್ ಠಾಣೆ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications