ಎಚ್ಡಿಕೆ ವಿರುದ್ಧ ಲಂಚ ಆರೋಪ : ರೆಡ್ಡಿಗೆ ಹಿನ್ನಡೆ

ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ವಿರುದ್ಧ 150 ಕೋಟಿ ರುಪಾಯಿ ಲಂಚ ಆರೋಪ ಮಾಡಿದ್ದ ಜನಾರ್ದನರೆಡ್ಡಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸುಪ್ರಿಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಮಂಗಳವಾರ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠ ಅಕ್ರಮ ಆಸ್ತಿ ಸಂಪಾದನೆ ವಿಚಾರಣೆ ಕುರಿತು ಸುಪ್ರಿಂಕೋರ್ಟ್ ಗೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಯಾವ ಕೋರ್ಟ್ ನಲ್ಲಾದರೂ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟ ಹಿನ್ನೆಲೆಯಲ್ಲಿ ರೆಡ್ಡಿ ತಮ್ಮ ಅರ್ಜಿಯನ್ನು ವಾಪಸ್ ಪಡೆಯುವುದರೊಂದಿಗೆ ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ.
ನಿಮ್ಮ ಮೊಬೈಲಿನಲ್ಲಿ ದಟ್ಸ್ ಕನ್ನಡ ಪ್ರತ್ಯಕ್ಷ!











Click it and Unblock the Notifications