ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಣಿ ಲಂಚ ಹಗರಣ: ನಮಗೆ ಹಿನ್ನಡೆ ಆಗಿಲ್ಲ : ರೆಡ್ಡಿ

By Mahesh
|
Google Oneindia Kannada News

Janardhan Reddy
ಬಳ್ಳಾರಿ, ಆ. 12:150 ಕೋಟಿ ರು. ಗಣಿ ಲಂಚ ಹಗರಣದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ನಮಗೆ ಹಿನ್ನಡೆ ಆಗಿಲ್ಲ, ಹೈಕೋರ್ಟ್‌ಗೆ ಹೋಗಲು ಸುಪ್ರೀಂಕೋರ್ಟ್ ಸಲಹೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಗಣಿ ಲಂಚ ಹಗರಣದ ಆರೋಪ ಮಾಡಿದ್ದ ಜಿ. ಜನಾರ್ದನರೆಡ್ಡಿ ಅವರು ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಪ್ರಕರಣ ಕುರಿತು ಸುಪ್ರೀಂಕೋರ್ಟ್ ನೀಡಿರುವ ಸಲಹೆಯನ್ನು ನಾನು ಸ್ವಾಗತಿಸಿದ್ದೇನೆ. ಪ್ರಕರಣ ವಜಾ ಆಗಿಲ್ಲ. ಪ್ರಕರಣವನ್ನು ಹೈಕೋರ್ಟ್‌ನಲ್ಲಿ ಮುಂದುವರೆಸಬಹುದು ಎಂದು ಸುಪ್ರೀಂಕೋರ್ಟ್ ಸಲಹೆ ನೀಡಿದೆ. ಈ ಹಿನ್ನಲೆಯಲ್ಲಿ ನಮ್ಮ ವಕೀಲರು ಪ್ರಕರಣವನ್ನು ಹಿಂದಕ್ಕೆ ಪಡೆದಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಈ ಪ್ರಕರಣವನ್ನು ಮುಂದುವರೆಸುವ ನಿಟ್ಟಿನಲ್ಲಿ ಪಕ್ಷದ ವರಿಷ್ಠರ ಜೊತೆ ಚರ್ಚೆ ನಡೆಸುತ್ತೇನೆ. ಈ ಪ್ರಕರಣವನ್ನು ಲೋಕಾಯುಕ್ತಕ್ಕೆ ನೀಡಬೇಕೋ ಅಥವಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕೋ ಎನ್ನುವ ವಿಚಾರವನ್ನು ಪಕ್ಷದ ವರಿಷ್ಠರೇ ಸಲಹೆ ನೀಡಲಿದ್ದಾರೆ. ಪಕ್ಷದ ವರಿಷ್ಠರ ಸಲಹೆಯ ನಂತರ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.

ಬದುಕಿನ ಕೊನೆಯ ಘಟ್ಟದಲ್ಲಿರುವ ಎಂ.ಪಿ. ಪ್ರಕಾಶ್, ಸುಷ್ಮಾ ಸ್ವರಾಜ್ ಅವರನ್ನು ಟೀಕಿಸುವ ಅಗತ್ಯವೇ ಇರಲಿಲ್ಲ ಎಂದು ಮತ್ತೊಮ್ಮೆ ಅವರಿಗೆ ಸಲಹೆ ನೀಡಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X