ಇಬ್ರಾಹಿಂಗೆ 420 ಅಂದ್ರೂ ತಪ್ಪಾಗಲ್ಲ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ರಾಜಕೀಯ ಶೂನ್ಯಾವಸ್ಥೆಯಲ್ಲಿರುವ ಅವರು ತಲೆ ಕೆಟ್ಟವರಂತೆ ಮಾತನಾಡುತ್ತಿದ್ದಾರೆ ಎಂದರು. ಇಬ್ರಾಹಿಂ ನಾಲಿಗೆ ಮೇಲೆ ಹಿಡಿತವಿಟ್ಟುಕೊಳ್ಳುವುದು ಒಳಿತು ಎಂದು ಅವರು, ಇಬ್ರಾಹಿಂ ಅವರನ್ನು ಜೋಕರ್ ನಂತೆ ಕಾಂಗ್ರೆಸ್ ಪಕ್ಷ ಬಳಸಿಕೊಳ್ಳುತ್ತಿದೆ ಎಂದು ಲೇವಡಿ ಮಾಡಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಗ್ಗೆ ಇಬ್ರಾಹಿಂ ಹಗುರವಾಗಿ ಮಾತನಾಡುತ್ತಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಇವರ ವರ್ತನೆ ಹೀಗೆ ಮುಂದುವರೆದರೆ ಇದಕ್ಕೆ ತಕ್ಕ ಉತ್ತರ ನಾವು ಕೊಡುತ್ತೇವೆ ಎಂದು ರೇಣುಕಾಚಾರ್ಯ ಎಚ್ಚರಿಸಿದರು. ಹಿಂದುಳಿದ ವರ್ಗದ ನಾಯಕರಾಗಿರುವ ಬೇಳೂರು ಗೋಪಾಲಕೃಷ್ಣ ಅವರು ಏಕೆ ಸಚಿವರಾಗಬಾರದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇತ್ತೀಚೆಗೆ ಕಾಂಗ್ರೆಸ್ ನಡೆಸಿದ ಪಾದಯಾತ್ರೆ ಸಮಯದಲ್ಲಿ ಸಿಎಂ ಇಬ್ರಾಹಿಂ, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಅವರ ಸಂಪುಟದಲ್ಲಿರುವ ಸಚಿವರ ವಿರುದ್ಧ ಕೆಳಮಟ್ಟದಲ್ಲಿ ವಾಗ್ದಾಳಿ ನಡೆಸಿದ್ದರು.












Click it and Unblock the Notifications