ಆರ್ಎಸ್ಎಸ್ ವಿರುದ್ಧ ಮುಸ್ಲಿಂ ಮಹಿಳೆಯರ ಪ್ರತಿಭಟನೆ
ಹಾಸನ,
ಆ. 15 : ನಗರದ ಆರ್ಎಸ್ಎಸ್ ಕಚೇರಿ ಮೇಲೆ ಶುಕ್ರವಾರ ಕಿಡಿಗೇಡಿಗಳು ಕಲ್ಲು ತೂರಾಟ ಘಟನೆ ಮುಂದಿಟ್ಟುಕೊಂಡು ಪೊಲೀಸರು ವಿನಾಕಾರಣ ಕಿರುಕುಳ ನೀಡುತ್ತಿರುವುದಲ್ಲದೆ ಕೆಲವರನ್ನು ಬಂಧಿಸಿದ್ದಾರೆ ಎಂದು ಮುಸ್ಲಿಂ ಮಹಿಳೆಯರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. id="toptextpromo">ನಗರದ
ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಮುಸ್ಲಿಂ ಮಹಿಳೆಯರು, ಶುಕ್ರವಾರ ನಡೆದ ಘಟನೆಯಲ್ಲಿ ತಪ್ಪು ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಮುಸ್ಲಿಂ ಸಮಾಜದ ಎಲ್ಲರನ್ನೂ ಅನುಮಾನದಿಂದ ನೋಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನಗರ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದು, ನ್ಯಾಯ ಕೊಡಿಸದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದರು. id='are-slot-1' class='oiad oi-axt oiadv'> id='top-searched-articles'>ಆರ್ಎಸ್ಎಸ್
ಕಚೇರಿ ಪಾಂಚಜನ್ಯದ ಮೇಲೆ ನಡೆದ ಕಲ್ಲು ತೂರಾಟ ಘಟನೆಗೆ ಮುಸ್ಲಿಂ ಮೂಲಭೂತವಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕೈವಾಡವಿದೆ ಎಂದು ಭಜರಂಗದಳ ರಾಜ್ಯ ಸಂಚಾಲಕ ಸೂರ್ಯನಾರಾಯಣ ಹೇಳಿದ್ದಾರೆ.











Click it and Unblock the Notifications