ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್ಎಸ್ಎಸ್ ವಿರುದ್ಧ ಮುಸ್ಲಿಂ ಮಹಿಳೆಯರ ಪ್ರತಿಭಟನೆ

By Mrutyunjaya Kalmat
|
Google Oneindia Kannada News

RSS logo
ಹಾಸನ, ಆ. 15 : ನಗರದ ಆರ್ಎಸ್ಎಸ್ ಕಚೇರಿ ಮೇಲೆ ಶುಕ್ರವಾರ ಕಿಡಿಗೇಡಿಗಳು ಕಲ್ಲು ತೂರಾಟ ಘಟನೆ ಮುಂದಿಟ್ಟುಕೊಂಡು ಪೊಲೀಸರು ವಿನಾಕಾರಣ ಕಿರುಕುಳ ನೀಡುತ್ತಿರುವುದಲ್ಲದೆ ಕೆಲವರನ್ನು ಬಂಧಿಸಿದ್ದಾರೆ ಎಂದು ಮುಸ್ಲಿಂ ಮಹಿಳೆಯರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಮುಸ್ಲಿಂ ಮಹಿಳೆಯರು, ಶುಕ್ರವಾರ ನಡೆದ ಘಟನೆಯಲ್ಲಿ ತಪ್ಪು ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಮುಸ್ಲಿಂ ಸಮಾಜದ ಎಲ್ಲರನ್ನೂ ಅನುಮಾನದಿಂದ ನೋಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನಗರ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದು, ನ್ಯಾಯ ಕೊಡಿಸದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದರು.

ಆರ್ಎಸ್ಎಸ್ ಕಚೇರಿ ಪಾಂಚಜನ್ಯದ ಮೇಲೆ ನಡೆದ ಕಲ್ಲು ತೂರಾಟ ಘಟನೆಗೆ ಮುಸ್ಲಿಂ ಮೂಲಭೂತವಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕೈವಾಡವಿದೆ ಎಂದು ಭಜರಂಗದಳ ರಾಜ್ಯ ಸಂಚಾಲಕ ಸೂರ್ಯನಾರಾಯಣ ಹೇಳಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X