ಪ್ರಿಯಾಂಕಾ ಕೊಲೆ : ಸತೀಶ್ ಕುಟುಂಬ ಭಾಗಿ?

ಈ ಅನುಮಾನ ಪೊಲೀಸರನ್ನು ಬಲವಾಗಿ ಕಾಡತೊಡಗಿದ್ದು, ಇದಕ್ಕೆ ಕಾರಣ ಕುಟುಂಬ ಸದಸ್ಯರ ವರ್ತನೆ ಎನ್ನಲಾಗಿದೆ. ಹತ್ಯೆ ಹಿಂದೆ ಪ್ರಿಯಾಂಕಾ ಪತಿ ಸತೀಶ್ ಕುಮಾರ್ ಅವರ ಕೈವಾಡವಿರುವುದನ್ನು ಖಚಿತಪಡಿಸಿಕೊಂಡಿರುವ ಪೊಲೀಸರು ಗುರುವಾರ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಿಚಾರಣೆ ವೇಳೆ ಆತ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದ. ಇದನ್ನು ದೃಢೀಕರಿಸಲು ಅಗತ್ಯ ಸಾಕ್ಷಿ ಕಲೆ ಹಾಕುವ ಜವಾಬ್ದಾರಿ ಪೊಲೀಸರ ಮೇಲಿತ್ತು. ಆದರೆ, ಈ ಸಂದರ್ಭದಲ್ಲಿ ಪೊಲೀಸರು ಬೆಚ್ಚಿಬೀಳುವ ರೀತಿಯ ಅಸ್ತ್ರವೊಂದನ್ನು ಸತೀಶ್ ಕುಮಾರ್ ಸಂಬಂಧಿಗಳು ಪ್ರಯೋಗಿಸಿದರು, ಅದು ಹೇಬಿಯಸ್ ಕಾರ್ಪಸ್ ಅರ್ಜಿ.
ಹೀಗಾಗಿ, ಅನಿವಾರ್ಯವಾಗಿ ಪೊಲೀಸರು ಸತೀಶ್ ಕುಮಾರ್ ನನ್ನು ಶುಕ್ರವಾರ ನ್ಯಾಯಾಲಯಕ್ಕೆ ಒಪ್ಪಿಸಬೇಕಾಯಿತು. ನಂತರ ಆತನನ್ನು ಎಂಟು ದಿನಗಳ ಕಾಲ ಪೊಲೀಸರ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಳೆದ ಎರಡು ದಿನಗಳಿಂದ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ದಿನಕ್ಕೊಂದು ಕತೆ ಹೇಳಿ ತನಿಖೆಗೆ ದಾರಿ ತಪ್ಪಿಸುತ್ತಿದ್ದಾನೆ. ಆರಂಭದಲ್ಲಿ ಕೊಲೆಯನ್ನು ಒಪ್ಪಿಕೊಂಡ ಆತ ತಂದೆತಾಯಿಗೆ ಕಿರುಕುಳ ನೀಡುತ್ತಿದ್ದಳು ಎಂಬ ಕಾರಣ ನೀಡಿದ ನಂತರ ಮಾನಸಿಕ ಹಿಂಸೆ ನೀಡುತ್ತಿದ್ದಳು ಎಂಬ ಕಾರಣ ನೀಡಿದ್ದ.
ಆದರೆ, ತನಿಖೆ ನಡೆಸುತ್ತಿರುವ ಪೊಲೀಸರು ಈಗ ಪ್ರಕರಣದಲ್ಲಿ ಅನೈತಿಕ ಸಂಬಂಧದ ವಾಸನೆ ಕಂಡು ಹಿಡಿದಿದ್ದಾರೆ. ಸಾಲದ್ದಕ್ಕೆ ಈ ಕೊಲೆ ಹಿಂದೆ ಆತನ ಕುಟುಂಬ ಸದಸ್ಯರ ಕೈವಾಡವಿದೆ ಎನ್ನುವ ಅಂಶವನ್ನೂ ಪೊಲೀಸರು ಖಚಿತಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಕೊಲೆ ನಡೆದ ದಿನ ಮನೆಯಿಂದ ಸತೀಶ್ ಕುಮಾರ್ ಅಪಹರಿಸಿದ 2 ಲಕ್ಷ ರುಪಾಯಿ ನಗದು, ಚಿನ್ನಾಭರಣ ವಶಪಡಿಸಿಕೊಳ್ಳಲು ತಂಡ ರಚಿಸಲಾಗಿದ್ದು, ಇನ್ನೂ 6 ದಿನದೊಳಗೆ ಪ್ರಕರಣದಲ್ಲಿ ಏನೇನು ನಡೆದಿದೆ ಎಂಬುದನ್ನು ಬಯಲುಗೊಳಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications