ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿ : ಸಿಎಂ
ಬೆಂಗಳೂರು,
ಆ. 17 : ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನೀಗಿಸಲು ಇನ್ನೂ 1000 ಮೆಗಾವ್ಯಾಟ್ ವಿದ್ಯುತ್ ಖರೀದಿಸಲು ಸರಕಾರ ತೀರ್ಮಾನಿಸಿದೆ. 500 ಮೆಗಾವ್ಯಾಟ್ ವಿದ್ಯುತ್ ಖರೀದಿಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದರು. ವಿದ್ಯುತ್ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಇಂಧನ ಇಲಾಖೆಯೊಂದಿಗೆ ಸಮಾಲೋಚಿಸಿದ ನಂತರ 1000 ಮೆಗಾವ್ಯಾಟ್ ವಿದ್ಯುತ್ ಖರೀದಿಸುವುದಾಗಿ ಅವರು ಹೇಳಿದ್ದಾರೆ. id="toptextpromo">ಗೃಹ
ಕಚೇರಿ ಕೃಷ್ಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಕಾಲದಲ್ಲಿ ಮಳೆ ಬಂದು ಜಲಾಶಯಗಳು ತುಂಬಿದ್ದರೆ ಇಂತಹ ಪರಿಸ್ಥಿತಿ ಉಂಟಾಗುತ್ತಿರಲಿಲ್ಲ. ವಿದ್ಯುತ್ ಸಮಸ್ಯೆ ನೀಗಿಸಲು ಸರಕಾರ ಸಿದ್ಧ. ಎಷ್ಟೇ ಖರ್ಚಾದರೂ ಹೊರರಾಜ್ಯಗಳಿಂದ ವಿದ್ಯುತ್ ಖರೀದಿಸಿ ಪೂರೈಸಲಾಗುವುದು ಎಂದರು. id='are-slot-1' class='oiad oi-axt oiadv'> id='top-searched-articles'>ಗುಣಮಟ್ಟದ
ವಿದ್ಯುತ್ ಪೂರೈಕೆ ಮಾಡಬೇಕೆಂಬ ಆಸೆ ಸರಕಾರಕ್ಕೆ ಇದ್ದರೂ, ಪರಿಸ್ಥಿತಿ ಬಿಗಡಾಯಿಸಿದೆ. ಪರಿಸ್ಥಿತಿ ಸುಧಾರಿಸುವವರೆಗೂ ವಿದ್ಯುತ್ ಖರೀದಿಸಲಾಗುವುದು. ಪೂರೈಕೆಯಲ್ಲಿನ ನ್ಯೂನ್ಯತೆ ಹಾಗೂ ವಿದ್ಯುತ್ ಕಳ್ಳತನ ತಡೆಯಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.











Click it and Unblock the Notifications