ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರವಾಹ ಪೀಡಿತ ಪಾಕಿಸ್ತಾನಕ್ಕೆ ವಿಶ್ವಬ್ಯಾಂಕ್ ನೆರವು

By Mahesh
|
Google Oneindia Kannada News

World Bank agrees to provide $900 million to Pakistan
ವಾಷ್ಟಿಂಗನ್, ಆ.17: ಪಾಕಿಸ್ತಾನದಲ್ಲಿ ಭಾರೀ ಪ್ರವಾಹದಿಂದ 14 ಮಿಲಿಯನ್ ಜನರಿಗೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ವಿಶ್ವಬ್ಯಾಂಕ್ 900 ಮಿಲಿಯನ್ ಡಾಲರ್ ನೆರವು ನೀಡಲು ಒಪ್ಪಿಗೆ ಸೂಚಿಸಿದೆ.

ಪಾಕಿಸ್ತಾನಲ್ಲಿ ಉಂಟಾಗಿರುವ ನಷ್ಟದ ಅಂದಾಜು ವಿವರ ತಿಳಿಯಲು ವಿಶ್ವಬ್ಯಾಂಕ್, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಹಾಗೂ ವಿಶ್ವಸಂಸ್ಥೆಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಂಡಿದ್ದವು.

ಈ ಅಂದಾಜು ಮುಂದಿನ ಅಕ್ಟೋಬರ್ 15 ರೊಳಗೆ ಪೂರ್ಣಗೊಳ್ಳಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಪಾಕಿಸ್ತಾನದ ನೈಸರ್ಗಿಕ ವಿಕೋಪ ನಿರ್ವಹಣಾ ಪ್ರಾಧಿಕಾರ 14 ಮಿಲಿಯನ್ ಜನರ ಜೀವನ ಅಸ್ತವ್ಯಸ್ತಗೊಂಡಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಿದ್ದು ಈ ಸಂಖ್ಯೆ ಇನ್ನೂ ಏರಲಿದೆ.

ಪ್ರವಾಹಕ್ಕೆ ತುತ್ತಾಗಿರುವ ಸುಮಾರು 1,32,421 ಕಿಲೋಮೀಟರ್ ಹಾಗೂ 1.4 ಮಿಲಿಯ ಎಕರೆ ಬೆಳೆ ಬೆಳೆದಿದ್ದ ಪ್ರದೇಶದಲ್ಲಿ ಪುನಃ ಮಳೆ ಸುರಿಯುತ್ತಿರುವುದರಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದು ಪರಿಹಾರ ಕಾರ್ಯಗಳಿಗೆ ತೊಂದರೆ ಆಗಿದೆ.

ಈ ಪ್ರವಾಹ, 2005 ರ ಭೂಕಂಪಕ್ಕಿಂತ ಹೆಚ್ಚಿನ ಹಾನಿಯನ್ನುಂಟು ಮಾಡಿದೆ ಎಂದು ಹೇಳಲಾಗಿದೆ. ವಿಶ್ವ ಬ್ಯಾಂಕಿನ ಪ್ರಾಥಮಿಕ ಅಂದಾಜಿನ ಪ್ರಕಾರ ಮನೆಗಳಿಗೆ ಹೆಚ್ಚಿನ ಹಾನಿಯಾಗಿದ್ದು 7,23,000 ಮನೆಗಳು ಹಾನಿಗೀಡಾಗಿವೆ ಅಥವಾ ನಾಶವಾಗಿವೆ. ರಸ್ತೆ, ನೀರಾವರಿ, ಮತ್ತು ಕೃಷಿ ಭೂಮಿಗಳಿಗೆ ಹೆಚ್ಚಿನ ನಷ್ಟ ಆಗಿದ್ದು 1 ಬಿಲಿಯನ್ ಡಾಲರ್ ಮೌಲ್ಯದ ಬೆಳೆ ನಷ್ಟ ಆಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X