ಕಾಮನ್ ವೆಲ್ತ್ ಭ್ರಷ್ಟರ ವಿರುದ್ಧ ಕ್ರಮ : ಸೋನಿಯಾ
ನವದೆಹಲಿ,
ಆ. 19 : ಕಾಮನ್ ವೆಲ್ತ್ ಕ್ರೀಡಾಕೂಟದ ಸಿದ್ಧತೆಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಸೋನಿಯಾಗಾಂಧಿ ಕೊನೆಗೂ ದನಿ ಎತ್ತಿದ್ದಾರೆ. ಕ್ರೀಡಾಕೂಟದ ನಂತರ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. id="toptextpromo">ಕಾಂಗ್ರೆಸ್
ಸಂಸದೀಯ ಮಂಡಳಿಯ ಸಭೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಮನ್ ವೆಲ್ತ್ ಕ್ರೀಡಾಕೂಟ ನಡೆಸುವ ಅವಕಾಶ ಭಾರತಕ್ಕೆ ಸಿಕ್ಕಿರುವುದು ಸಂತಸ ವಿಷಯ. ಇಂತಹ ಗಳಿಗೆಯಲ್ಲಿ ಬೇರೆ ವಿಷಯದ ಕಡೆಗೆ ಗಮನ ಹರಿಸದೆ ಮೊದಲು ಕ್ರೀಡಾಕೂಟವನ್ನು ಪೂರ್ಣಗೊಳಿಸೋಣ. ಇದಕ್ಕೆ ಎಲ್ಲರೂ ಸಹಕಾರ ನೀಡುವ ಮೂಲಕ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದು ಸೋನಿಯಾ ಮನವಿ ಮಾಡಿಕೊಂಡರು. id='are-slot-1' class='oiad oi-axt oiadv'> id='top-searched-articles'>ಕಾಮನ್
ವೆಲ್ತ್ ಕ್ರೀಡಾಕೂಟದ ಸಿದ್ಧತೆಯಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಪರಿಶೀಲನೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರದಲ್ಲಿ ಶಾಮೀಲಾಗಿರುವುದು ಸಾಬೀತಾದರೆ ಅಂತವರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಸುರೇಶ್ ಕಲ್ಮಾಡಿ ಅವರಿಗೆ ಎಚ್ಚರಿಕೆ ನೀಡಿದರು. ಕಾಮನ್ ವೆಲ್ತ್ ಕ್ರೀಡಾಕೂಟ ಬರೀ ಸರಕಾರಕ್ಕೆ ಮಾತ್ರ ಸೀಮಿತವಾಗಿರುವ ಕ್ರೀಡೆಯಲ್ಲ. ಇಡೀ ದೇಶದ ಕ್ರೀಡಾಕೂಟ. ಇದನ್ನು ಯಶಸ್ವಿಗೊಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ. ಹೀಗಾಗಿ ಪಕ್ಷಬೇಧ ಮರೆತು ಎಲ್ಲರೂ ಶ್ರಮಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.











Click it and Unblock the Notifications