ಹಬ್ಬ ಸಂಭ್ರಮಕ್ಕೆ ಉಗ್ರರ ಭೀತಿಯ ಕರಿ ನೆರಳು

ಕೇರಳ ಸೇರಿದಂತೆ ಕರ್ನಾಟಕದಲ್ಲೂ ಸಂಭಾವ್ಯ ದಾಳಿ ಸಾಧ್ಯತೆ ಕುರಿತು ಗೃಹ ಸಚಿವಾಲಯ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಲಷ್ಕರ್ ಇ ತೋಯ್ಬಾ ಸೇರಿದಂತೆ ಪಾಕಿಸ್ತಾನದಪ್ರಮುಖ ಭಯೋತ್ಪಾದನಾ ಸಂಘಟನೆಗಳು ಭಾರತದ ಮೇಲೆ ದೃಷ್ಟಿ ಹರಿಸಿವೆ.
ಗೃಹ ಸಚಿವಾಲಯದ ಎಚ್ಚರಿಕೆಯನ್ವಯ, ಸಾರ್ವಜನಿಕ ಸ್ಥಳಗಳಲ್ಲಿ ತಪಾಸಣೆ, ಮಾರುಕಟ್ಟೆ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಪಾರ್ಕ್‌ಗಳು ಸೇರಿದಂತೆ ಜನನಿಬಿಡ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಬೇಕೆಂದು ಎಚ್ಚರಿಸಲಾಗಿದೆ.
ಸದ್ಯ ಆರಂಭವಾಗಿರುವ ರಂಜಾನ್ ಜತೆಗೆ ರಕ್ಷಾ ಬಂಧನ್, ಈದ್-ಉಲ್ ಫಿತರ್, ಓಣಂ ಹಾಗೂ ವರಮಹಾಲಕ್ಷ್ಮಿ ಹಬ್ಬದ ವೇಳೆ ಇರುವ ಜನರ ಸಂಭ್ರಮವನ್ನು ಹಿಂಸಾಚಾರದ ಮೂಲಕ ಬೆದರಿಸುವ ನಿಟ್ಟಿನಲ್ಲಿ ಭಯೋತ್ಪಾದನಾ ಶಕ್ತಿಗಳು ಸಂಚು ರೂಪಿಸಿವೆ. ಹೀಗಾಗಿ ಕೂಡಲೇ ಬಿಗಿ ಭದ್ರತೆ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೂ ಕಟ್ಟಪ್ಪಣೆ ವಿಧಿಸಿದೆ ಎಂದು ತಿಳಿದು ಬಂದಿದೆ.
ಮದನಿ ಬಂಧನ ಮತೀಯ ಗಲಭೆಗೆ ಆಹ್ವಾನ :ಬೆಂಗಳೂರು ಸರಣಿ ಸ್ಫೋಟ ಪ್ರಕರಣದ ಶಂಕಿತ ಆರೋಪಿ ಅಬ್ದುಲ್ ನಾಸೀರ್ ಮದನಿಯನ್ನು ಕೇರಳದಲ್ಲಿ ಬಂಧಿಸಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ.
ಈಗಾಗಲೇ ಮದನಿ ಬಂಧನ ಹಿನ್ನೆಲೆಯಲ್ಲೂ ಮತೀಯವಾದಿಗಳಿಂದ ದಾಳಿ ನಡೆಯುವ ಭೀತಿ ಎದುರಾಗಿರುವಾಗಲೇ ಕೂಡಲೇ ಹೆಚ್ಚುವರಿ ಪಡೆಯನ್ನು ಸೂಕ್ಷ್ಮ ಪ್ರದೇಶಗಳಿಗೆ ನಿಯೋಜಿಸುವಂತೆ ಕೇಂದ್ರ ಗೃಹ ಸಚಿವಾಲಯ ಕರ್ನಾಟಕ ದಿಲ್ಲಿ ಹಾಗೂ ಕೇರಳ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.
ಆ.20ರಂದು ವರಮಹಾಲಕ್ಷ್ಮಿ ಹಬ್ಬವಿದ್ದರೆ, ಆ.23ಕ್ಕೆ ದೇಶಾದ್ಯಂತ ಓಣಮ್ ಹಬ್ಬವಿದೆ. ಆ.24ರಂದು ರಕ್ಷಾಬಂಧನ್ ಹಾಗೂ ಸೆ.13ರಂದು ಇದ್ ಉಲ್ ಫಿತರ್ ಹಬ್ಬವಿರುವುದರಿಂದ ಈ ಸಂದರ್ಭದಲ್ಲಿ ಹಿಂಸಾಚಾರ ನಡೆಸಲು ಉಗ್ರರು ಸಂಚು ಹೂಡಿದ್ದಾರೆಂದು ಆತಂಕ ವ್ಯಕ್ತಪಡಿಸಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications