ಗೋಹತ್ಯೆ ನಿಷೇಧ : ಬಿಜೆಪಿಯಿಂದ ಜನಾಂದೋಲನ
ಬೆಂಗಳೂರು,
ಆ. 23 : ಗೋಹತ್ಯೆ ವಿಧೇಯಕದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ರಾಷ್ಟ್ರಪತಿಯ ಮೇಲೆ ಒತ್ತಡ ಹೇರುವ ತಂತ್ರವಾಗಿ ರಾಜ್ಯಾದ್ಯಂತ ಆಂದೋಲನ ನಡೆಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ. id="toptextpromo">ವಿಧಾನಮಂಡಲದ
ಉಭಯ ಸದನಗಳಲ್ಲಿ ಅಂಗೀಕರಿಸಿದ ಈ ವಿಧೇಯಕವನ್ನು ರಾಜ್ಯಪಾಲರು ರಾಷ್ಟ್ರಪತಿಯ ಅನುಮೋದನೆಗೆ ಕಳುಹಿಸಿದ್ದಾರೆ. ಅಂಕಿತ ಹಾಕದಂತೆ ರಾಜ್ಯ ಕಾಂಗ್ರೆಸ್ ನಾಯಕರು ರಾಷ್ಟ್ರಪತಿಗೆ ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಪದಾಧಿಕಾರಿಗಳ ಸಭೆಯಲ್ಲಿ ಬಿಜೆಪಿ ಈ ನಿರ್ಣಯ ತೆಗೆದುಕೊಂಡಿದೆ. id='are-slot-1' class='oiad oi-axt oiadv'> id='top-searched-articles'>ವಿಧೇಯಕದ
ಪರವಾಗಿ ಜನಾಭಿಪ್ರಾಯ ಮೂಡಿಸಲು ಸೆ. 1ರಿಂದ 5ರವರೆಗೆ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಸಮಾವೇಶ ನಡೆಸಲಾಗುವುದು. ಸೆ.6ರಂದು ಬೃಹತ್ ಸಮಾವೇಶವನ್ನು ಬೆಂಗಳೂರಿನಲ್ಲಿ ನಡೆಸಲಾಗುವುದು. ಸಿಎಂ ಯಡಿಯೂರಪ್ಪ ಸೇರಿದಂತೆ ಎಲ್ಲ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಕ್ತಾರ ಸಿಟಿ ರವಿ ತಿಳಿಸಿದ್ದಾರೆ.











Click it and Unblock the Notifications