ಅಕ್ರಮ ಗಣಿಗಾರಿಕೆ : ಧರ್ಮಸಿಂಗ್ ಹೆಸರು ಮಾಯ?

ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ವರದಿಯಲ್ಲಿ ಧರ್ಮಸಿಂಗ್ ಅವರು ಅಕ್ರಮ ಗಣಿಗಾರಿಕೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖವಾಗಿತ್ತು. ರಾಜ್ಯಪಾಲರ ಎಚ್ ಆರ್ ಭಾರದ್ವಾಜ್ ಮುತುವರ್ಜಿ ವಹಿಸಿ ಮಾಜಿಮುಖ್ಯಮಂತ್ರಿ ಧರ್ಮಸಿಂಗ್ ಅವರ ಹೆಸರನ್ನು ವರದಿಯಿಂದ ತೆಗೆದು ಹಾಕಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಧರ್ಮಸಿಂಗ್, ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತರ ವರದಿಯಲ್ಲಿದ್ದ ನನ್ನ ಹೆಸರನ್ನು ರಾಜ್ಯಪಾಲರು ತೆಗೆದುಹಾಕಿದ್ದು ಸರಿಯಾದ ಕ್ರಮ ಎಂದು ಹೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕೆ ಎಸ್ ಈಶ್ವರಪ್ಪ ಹುಚ್ಚುತನದ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಾದಯಾತ್ರೆ ಯಶಸ್ಸು, ಜನತೆಯಿಂದ ಅಪೂತಪೂರ್ವ ಬೆಂಬಲ ವ್ಯಕ್ತವಾಗಿರುವುದರಿಂದ ಯಡಿಯೂರಪ್ಪ, ಈಶ್ವರಪ್ಪ ಕಂಗಾಲಾಗಿದ್ದಾರೆ. ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಧರ್ಮಸಿಂಗ್ ಹೇಳಿದರು.












Click it and Unblock the Notifications