ಡಿಸೆಂಬರ್ ಅಂತ್ಯಕ್ಕೆ ಆಸರೆ ಪೂರ್ಣ : ಕರುಣಾಕರರೆಡ್ಡಿ
ಬೆಳಗಾವಿ,
ಆ. 24 : ಡಿಸೆಂಬರ್ ಅಂತ್ಯದೊಳಗೆ ಆಸರೆ ಯೋಜನೆಯ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಂತ್ರಸ್ಥರಿಗೆ ಮನೆಗಳನ್ನು ಹಸ್ತಾಂತರಿಸಲಾಗುವುದು ಎಂದು ಕಂದಾಯ ಸಚಿವ ಕರುಣಾಕರರೆಡ್ಡಿ ಹೇಳಿದರು. id="toptextpromo">ಬೆಳಗಾವಿ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಸರೆ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಚರ್ಚಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಈಗಾಗಲೇ ಜಿಲ್ಲೆಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿ ತೀವ್ರಗತಿಯಲ್ಲಿ ನಡೆಯುತ್ತಿದೆ. ಆದರೆ, ಕೆಲ ತಾಲ್ಲೂಕುಗಳಲ್ಲಿ ಕಾಮಗಾರಿ ಸ್ಥಗಿತಗೊಂಡಿರುವುದು ತಮ್ಮ ಗಮನಕ್ಕೆ ಬಂದಿದೆ. id='are-slot-1' class='oiad oi-axt oiadv'> id='top-searched-articles'>ಮನೆಗಳ
ನಿರ್ಮಾಣಕ್ಕೆ ಭೂಮಿ ಇಲ್ಲದ ಕಾರಣ ಮನೆಗಳ ನಿರ್ಮಾಣ ಸ್ಥಗಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೇರೆ ಕಡೆ ಭೂಮಿ ಖರೀದಿಸಿ ಮನೆಗಳ ನಿರ್ಮಾಣಕ್ಕೆ ಕೂಡಲೇ ಚಾಲನೆ ನೀಡಲಾಗುವುದು ಎಂದು ಕರುಣಾಕರರೆಡ್ಡಿ ಹೇಳಿದರು. ಈಗಾಗಲೇ ಚಿಕ್ಕೋಡಿ, ಅಥಣಿ ತಾಲ್ಲೂಕಿನಲ್ಲಿ ಕಾಮಗಾರಿ ಅರ್ಧದಷ್ಟು ಪೂರ್ಣಗೊಂಡಿದೆ. ಕಾಮಗಾರಿ ಪೂರ್ಣಗೊಂಡ ಕೆಲವಡೆ ಮನೆಗಳ ಹಸ್ತಾಂತರ ಕಾರ್ಯ ನಡೆದಿದೆ ಎಂದು ಸಚಿವರು ಹೇಳಿದರು.











Click it and Unblock the Notifications