ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಾಮಕ್ಕೆ ಉತ್ತೇಜನ

ಆಕ್ಟೋಬರ್3ರಿಂದ 14ರವರೆಗೆ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ನ ಕ್ರೀಡಾಗ್ರಾಮದಲ್ಲಿ 150 ರಿಂದ 200 ಕಾಂಡೋಮ್ ಮಾರಾಟ ಯಂತ್ರ ಅಳವಡಿಸುವ ನ್ಯಾಕೋ(NACO) ಹೇಳಿಕೆಗೆ ಅವರು ಖೇದ ವ್ಯಕ್ತಪಡಿಸಿದ್ದಾರೆ. ಕ್ರೀಡಾಕೂಟದ ಹಿನ್ನೆಲೆಯಲ್ಲಿ ರಷ್ಯಾ ಮತ್ತು ಪಶ್ಚಿಮ ಯೂರೋಪ್ ರಾಷ್ಟ್ರಗಳಿಂದ ಭಾರೀ ಸಂಖ್ಯೆಯಲ್ಲಿ ಯುವತಿಯರು ದಿಲ್ಲಿಗೆ ಆಗಮಿಸುವ ಸಾಧ್ಯತೆ ಇದೆ.
ಇದಕ್ಕಾಗಿಯೇ ಪ್ರಾತಿನಿಧಿಕ ಸಂಸ್ಥೆಗಳು ತಯಾರಿ ನಡೆಸಿವೆ ಎಂಬ ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ಅಯ್ಯರ್ ಟೀಕಾ ಪ್ರಹಾರ ನಡೆಸಿದ್ದರು. ಅಯ್ಯರ್ ಅವರ ವಾದವನ್ನು ರಾಮಾಜೋಯಿಸ್ ಸಮರ್ಥಿಸಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್ ಆಯೋಜಕ ಸಮಿತಿ ಅಧ್ಯಕ್ಷ ಸುರೇಶ್ ಕಲ್ಮಾಡಿ ಈ ಕ್ರೀಡಾಕೂಟದ ಮೂಲಕ ಭಾರತೀಯ ಪುರಾತನ ಸಂಸ್ಕೃತಿ ಮತ್ತು ಪರಂಪರೆಯನ್ನು ಎತ್ತಿ ಹಿಡಿಯುವುದಾಗಿ ಹೇಳುತ್ತಾರೆ.
ಅನೈತಿಕ ಚಟೂವಟಿಕೆಗೆ ಆಸ್ಪದ: ಆದರೆ ಗೇಮ್ಸ್ ಹೆಸರಿನಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ ಮತ್ತು ಲೈಂಗಿಕ ಚಟುವಟಿಕೆಗಳು ಪರಮ ಪಾತಕ ಕೃತ್ಯ. ಸುಮಾರು 200 ವೆಂಡಿಂಗ್ ಮೆಷಿನ್ ಗಳಿಂದ ಅಂದಾಜು ದಿನವೊಂದಕ್ಕೆ 3 ರಿಂದ 3300ಕಾಂಡೋಮ್ ಪ್ಯಾಕ್‌ಗಳು ಬಳಕೆಯಾಗುತ್ತವೆ ಎಂಬುದಾದರೆ, ಪ್ರತಿ ನಿತ್ಯ ಸುಮಾರು ಒಂದು ಲಕ್ಷ ಕಾಂಡೋಮ್‌ಗಳು ಬಳಸಲ್ಪಟ್ಟಂತಾಯಿತು.
ಹೀಗಾದರೆ ಕ್ರೀಡಾಪಟುಗಳಿಂದ ಬೇರೇನನ್ನು ನಿರೀಕ್ಷಿಸಲು ಸಾಧ್ಯ. ಕ್ರೀಡಾಗ್ರಾಮದಲ್ಲಿ ಕಾಂಡೋಮ್ ಯಂತ್ರ ಅಳವಡಿಕೆಯಿಂದ ಬೇರೊಂದು ಸಂಪ್ರದಾಯಕ್ಕೆ ನಾಂದಿ ಹಾಡಿದಂತಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವೆ ಕು.ಶೆಲ್ಜಾ ಅವರಿಗೆ ಅಯ್ಯರ್ ಬರೆದಿರುವ ಪತ್ರವನ್ನು ಉಲ್ಲೇಖಿಸಿರುವ ಜೋಯಿಸ್ ಅವರು, ವ್ಯಭಿಚಾರಕ್ಕೆ ಉತ್ತೇಜನ ಮತ್ತು ವ್ಯಾಪಕ ಭ್ರಷ್ಟಾಚಾರದಿಂದಾಗಿ ದೇಶದ ಪ್ರತಿಷ್ಠೆಗೆ ಧಕ್ಕೆಯಾಗಲಿದೆ ಹೀಗಾಗಿ ಕಾಮನ್ ವೆಲ್ತ್ ಗೇಮ್ಸ್
ವೇಳೆ ಇಂತಹ ಅನೈತಿಕ ಚಟುವಟಿಕೆಗಳಿಗೆ ಆಸ್ಪದ ನೀಡದಂತೆ ಕೇಂದ್ರದ ಪ್ರವಾಸೋದ್ಯಮ ಸಚಿವರನ್ನು ರಾಮಾಜೋಯಿಸ್ ಆಗ್ರಹಿಸಿದ್ದಾರೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications