ಕೇಸರಿ ಭಯೋತ್ಪಾದನೆಗೆ ಚಿದು ಆತಂಕ
ನವದೆಹಲಿ,
ಆ. 26 : ದೇಶದಲ್ಲಿ ಕೇಸರಿ ಭಯೋತ್ಪಾದನೆ ಎಂಬ ನೂತನ ಅನುಭವ ಅರಂಭವಾಗಿರುವುದು ಕಳವಳಕ್ಕೆ ಕಾರಣವಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದ್ದಾರೆ. id="toptextpromo">ಎಲ್ಲ
ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರ ಮತ್ತು ಪೊಲೀಸ್ ಮಹಾನಿರೀಕ್ಷಕರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಹಲವಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಕೇಸರಿ ಪಡೆ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದರು. ಯುವಕ-ಯುವತಿಯರನ್ನು ತೀವ್ರಗಾಮಿಗಳನ್ನಾಗಿ ಮಾಡಲು ಬಿಡುವುದಿಲ್ಲ. ದೇಶದ್ರೋಹಿ ಚಟುವಟಿಕೆಗಳಲ್ಲಿ ಪಾಲ್ಗೊಂಡವರು ಯಾರೇ ಆಗಿದ್ದರೂ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಚಿದಂಬರಂ ಎಚ್ಚರಿಕೆ ನೀಡಿದರು. id='are-slot-1' class='oiad oi-axt oiadv'> id='top-searched-articles'>ಕಳೆದ
21 ತಿಂಗಳ ಅವಧಿಯಲ್ಲಿ ಪುಣೆಯ ಜರ್ಮನಿ ಬೇಕರಿ ಬಳಿ ನಡೆಸಿ ಬಾಂಬ್ ಸ್ಫೊಟ ಹೊರತುಪಡಿಸಿ ದೇಶದ ಯಾವುದೇ ಭಾಗದಲ್ಲಿ ಭಯೋತ್ಪಾದಕ ದಾಳಿ ನಡೆದಿಲ್ಲ. ಪುಣೆ ಸ್ಫೋಟದ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹೇಳಿದರು. ಕಾಶ್ಮೀರದಲ್ಲಿ ಪರಿಸ್ಥಿತಿ ಅಷ್ಟೇನೂ ಚೆನ್ನಾಗಿಲ್ಲ. ಮುಂದಿನ ದಿನಗಳಲ್ಲಿ ವಾತಾವರಣ ತಿಳಿಗೊಳಿಸುವ ವಿಶ್ವಾಸವಿದೆ. ಪ್ರತಿಭಟನಾಕಾರರ ತಾಣವನ್ನು ಪತ್ತೆ ಹಚ್ಚಲಾಗಿದ್ದು, ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿರುವ ಪ್ರತ್ಯೇಕತಾವಾದಿಗಳ ಜೊತೆ ಮಾತುಕತೆ ನಡೆಸಲಾಗುವುದು ಎಂದು ಚಿದಂಬರಂ ವಿವರಿಸಿದರು.











Click it and Unblock the Notifications