ಅನಿಲ್ ಲಾಡ್ ಸಂಡೂರು ಗಣಿ ಕಂಪನಿ ಮೇಲೆ ದಾಳಿ

ಈ ಬಗ್ಗೆ ಪ್ರತಿಕ್ರಿಯಿಸಿರುವ ಅನಿಲ್ ಲಾಡ್, ಈ ದಾಳಿಯನ್ನು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಬಳ್ಳಾರಿ ರೆಡ್ಡಿ ಸಹೋದರರ ಜೊತೆ ಹೊಂದಾಣಿಕೆ ಮಾಡಿಕೊಳ್ಳಿ ಎಂದು ನೆನ್ನೆಯಷ್ಟೆ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ತಮಗೆ ದೂರವಾಣಿ ಕರೆ ಬಂದಿತ್ತು ಎಂದು ದೂರಿದ್ದಾರೆ.
ತಮ್ಮ ಕಂಪನಿ ಮೇಲೆ ದಾಳಿ ಮಾಡಲು ಪೊಲೀಸರಿಗೆ, ಡಿಎಫ್ ಒ ಮತ್ತು ಆರ್ ಎಫ್ ಒ ಅಧಿಕಾರಿಗಳಿಗೆ ಯಾರು ಆದೇಶಿಸಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇವರಿಗೆ ಮುಖ್ಯಮಂತ್ರಿಗಳು ಆದೇಶಿಸಿದರೆ ಅಥವಾ ಜಿಲ್ಲಾ ಉಸ್ತುವಾರಿ ಸಚಿವರು ಆದೇಶಿಸಿದರೆ ಅಥವಾ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಆದೇಶಿಸಿದರೆ ಗೊತ್ತಿಲ್ಲ ಎಂದಿದ್ದಾರೆ.
ಸಿಎಂ ಪ್ರತಿಕ್ರಿಯೆ: ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಈ ಕುರಿತು ತಾವು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೀದರ್ ನ ಕುಂದಗೋಳದಲ್ಲಿ ಪ್ರತಿಕ್ರಿಯಿಸಿದ್ದಾರೆ. ಒಟ್ಟಿನಲ್ಲಿ ಬಳ್ಳಾರಿ ಗಣಿ ಗದ್ದಲ ಮತ್ತೊಮ್ಮೆ ಸದ್ದು ಮಾಡಿದೆ.












Click it and Unblock the Notifications