ಕಾಮನ್ ವೆಲ್ತ್ ಸಾಂಸ್ಕೃತಿಕ ತಂಡಕ್ಕೆ ಬಳಿಗಾರ ಹೆಡ್
ಬೆಂಗಳೂರು,
ಆ. 31 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಮನು ಬಳಿಗಾರ ಅವರು ನವದೆಹಲಿಯಲ್ಲಿ ಅಕ್ಟೋಬರ್ 3 ರಿಂದ ಆರಂಭವಾಗಲಿರುವ ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ರೂಪಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮದ ಕರ್ನಾಟಕದ ನೋಡಲ್ ಅಧಿಕಾರಿಯಾಗಿ ನೇಮಕವಾಗಿದ್ದಾರೆ. id="toptextpromo">ಕ್ರೀಡಾಕೂಟದ
ಅಂಗವಾಗಿ ನಡೆಯುವ 'ಡೆಲ್ಲಿ ಸೆಲೆಬ್ರೆಟ್ಸ್' ಕಾರ್ಯಕ್ರಮದಲ್ಲಿ ಅವರು ಕರ್ನಾಟಕದ ಸಾಂಸ್ಕೃತಿಕ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಇಲಾಖೆ ಹೇಳಿದೆ. ಸೆಪ್ಟೆಂಬರ್ 30 ರಂದು ದೆಹಲಿಯ ಹಾತ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇಲಾಖೆ ವತಿಯಿಂದ ಸುಮಾರು ಐದು ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಉದ್ದೇಶಿಸಲಾಗಿದೆ ಎಂದು ಮನು ಬಳಿಗಾರ ತಿಳಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಕಾರ್ಯಕ್ರಮದಲ್ಲಿ
ಕರ್ನಾಟಕ ಮತ್ತು ಹಿಂದೂಸ್ತಾನಿ ಸಂಗೀತ ಕರ್ನಾಟಕದ ವೈಭವವನ್ನು ಪ್ರತಿಬಿಂಬಿಸುವ ನೃತ್ಯ ರೂಪಕ, ಜಾನಪದ ಕಲೆಗಳಾದ ಡೊಳ್ಳು, ಕುಣಿತ, ಪೂಜಾ ಕುಣಿತ, ವೀರಗಾಸೆ, ಬೀಸು ಕಂಸಾಳೆ ಮುಂತಾದ ಕಲೆಗಳನ್ನು ಪ್ರದರ್ಶಿಸಲಾಗುವುದು ಎಂದು ಅವರು ಹೇಳಿದರು.











Click it and Unblock the Notifications