ಮಳೆಯಿಂದ 149 ಕೋ. ರು. ಹಾನಿ : ಸಿಎಂ
ಬೆಂಗಳೂರು,
ಆ. 31 : ರಾಜ್ಯದ 11 ಜಿಲ್ಲೆಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ 20 ಮಂದಿ ಮೃತಪಟ್ಟಿದ್ದು, 149 ಕೋಟಿ ರುಪಾಯಿಗೂ ಹೆಚ್ಚಿನ ನಷ್ಟ ಉಂಟಾಗಿದೆ. ಒಟ್ಟಾರೆ 2,03,760 ಹೆಕ್ಟರ್ ನಲ್ಲಿ ಬೆಳೆದ ಬೆಳೆ ನಾಶವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. id="toptextpromo">ಕಂದಾಯ,
ಕೃಷಿ, ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. 11 ಜಿಲ್ಲೆಗಳ 41 ತಾಲ್ಲೂಕುಗಳ 117 ಹೋಬಳಿಗಳಲ್ಲಿ ಅತ್ಯಧಿಕ ಮಳೆ ಸುರಿದಿದೆ. ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಸುರಿದಿದ್ದರಿಂದಾಗಿ 8198 ಮನೆಗಳಿಗೆ ಹಾನಿ ಸಂಭವಿಸಿದೆ. id='are-slot-1' class='oiad oi-axt oiadv'> id='top-searched-articles'>ರಾಜ್ಯದ
ವಿವಿಧ ಜಿಲ್ಲೆಗಳಲ್ಲಿ 1,03,760 ಹಕ್ಟೇರ್ ಬೆಳೆ ನಾಶವಾಗಿದ್ದರೆ, ಬೀದರ್ ಮತ್ತು ಗುಲ್ಬರ್ಗಾದಲ್ಲಿ ಕಳೆದ 8 ದಿನಗಳಲ್ಲಿ ಸುರಿದ ಮಳೆಯಿಂದಾಗಿ 1 ಲಕ್ಷ ಹೆಕ್ಟೇರ್ ನಲ್ಲಿ ಬೆಳೆದಿದ್ದ ದ್ವಿದಳ ಧಾನ್ಯ ಬೆಳೆಗೆ ಹಾನಿಯಾಗಿದೆ ಎಂದು ಅವರು ವಿವರಿಸಿದರು. ಮಳೆಯಿಂದಾಗಿ ಸಂತ್ರಸ್ತರಾದವರ ಕುಟುಂಬದವರಿಗೆ ಪುನರ್ವಸತಿ ಕಲ್ಪಿಸಲು ಬಳ್ಳಾರಿಯಲ್ಲಿ 3, ಗದಗ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ತಲಾ ಒಂದು ತಾತ್ಕಾಲಿಕ ಪುನರ್ವಸತಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.











Click it and Unblock the Notifications