ಗಜರಾಜನಿಗೆ ಭಾರತದ ಪಾರಂಪರಿಕ ಪ್ರಾಣಿ ಸ್ಥಾನ

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ಪರಿಸರ ಸಚಿವ ಜೈರಾಮ್ ರಮೇಶ್ ಈ ವಿಷಯವನ್ನು ತಿಳಿಸಿದರು.
ದೇಶದ ಧರ್ಮ ಮತ್ತು ಸಂಸ್ಕೃತಿಯೊಂದಿಗೆ ನಿಕಟವಾಗಿ ಗುರುತಿಸಿಕೊಂಡಿರುವ ಆನೆಯ ರಕ್ಷಣೆ ಕ್ರಮವಾಗಿ ಅದನ್ನು ರಾಷ್ಟ್ರೀಯ ಪರಂಪರೆ ಪ್ರಾಣಿ ಎಂದು ಘೋಷಿಸಲಾಗುವುದೆಂದು ಸ್ಪಷ್ಟಪಡಿಸಿದರು. ರಕ್ಷಣೆಗೆ ಮಹತ್ವ ಆನೆಯು ಶತಮಾನಗಳಿಂದಲೂ ನಮ್ಮ ಪರಂಪರೆಯ
ಭಾಗವಾಗಿದೆ.
ಆದರೆ ಇತ್ತೀಚೆಗೆ ಅರಣ್ಯ ನಾಶ ಹಾಗೂ ದಂತಕಳ್ಳರ ಹಾವಳಿಯಿಂದಾಗಿ ಆನೆಗಳ ಸಂತತಿ ಅವನತಿಯತ್ತ ಸಾಗಿದೆ. ಹೀಗಾಗಿ ಅವಸಾನದ ಅಂಚಿ ನಲ್ಲಿರುವ ರಾಷ್ಟ್ರೀಯ ಪ್ರಾಣಿ ಹುಲಿಯ ರಕ್ಷಣೆಗೆ ನೀಡಿರುವಷ್ಟೇ ಮಹತ್ವವನ್ನು ನಾವು ಆನೆಯ ರಕ್ಷಣೆಗೂ ನೀಡುವ ಅಗತ್ಯವಿದೆ ಎಂದು ಅವರು ಹೇಳಿದರು.
ಸರಕಾರವು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಡಾಲ್ಫಿನ್‌ನ್ನು ರಾಷ್ಟ್ರೀಯ ಜಲಚರ ಪ್ರಾಣಿ ಎಂದು ಕೇಂದ್ರ ಸರಕಾರವು ಘೋಷಿಸಿತ್ತು. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾದರಿಯಲ್ಲಿ ರಾಷ್ಟ್ರೀಯ ಆನೆಗಳ ಸಂರಕ್ಷಣಾ ಪ್ರಾಧಿಕಾರವನ್ನು ಸ್ಥಾಪಿಸಲು ವನ್ಯಜೀವಿ(ರಕ್ಷಣೆ) ಕಾಯ್ದೆಗೆ ತಿದ್ದುಪಡಿ ತರಲಾಗುವುದೆಂದೂ ರಮೇಶ್ ತಿಳಿಸಿದರು.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ತಿದ್ದುಪಡಿ ಯನ್ನು ಮಂಡಿಸಲಾಗುವುದು ಎಂದು ಹೇಳಿದ ಅವರು, ದೇಶ ದಲ್ಲೀಗ ಕೇವಲ 1141 ಹುಲಿಗಳಿವೆ. ಆನೆ ಸಂತತಿಯೂ ಅಂತಹ ಸ್ಥಿತಿ ತಲುಪುವ ಮೊದಲೇ ಅವುಗಳ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಒತ್ತಿ ನುಡಿದರು.
ಪರಿಸರ ಸಚಿವಾಲಯವು ರಚಿಸಿದ ಆನೆ ಕಾರ್ಯ ಪಡೆ(Elephant Task Force)ಯು ಮಂಗಳವಾರ ತನ್ನ ವರದಿಯನ್ನು ಸಚಿವರಿಗೆ ಸಲ್ಲಿಸಿದ್ದು, ಹೊಸ ಅಭಯಾರಣ್ಯಗಳನ್ನು ಸೃಷ್ಟಿಸುವ, ಕಳ್ಳಸಾಗಾಣಿಕೆಯನ್ನು ತಡೆಯುವ ಮತ್ತು ಅರಣ್ಯ ಪ್ರದೇಶಗಳಲ್ಲಿ ಆನೆಗಳು ಚಲಿಸುವ ಮಾರ್ಗದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಿರ್ಬಂಧಿಸುವ ಮೂಲಕ ಭಾರತವು ತನ್ನ ಆನೆ ಸಂತತಿಯನ್ನು ರಕ್ಷಿಸಬೇಕಾಗಿದೆ ಎಂದು ಬೊಟ್ಟು ಮಾಡಿದೆ.
ಮೃಗಾಲಯಗಳು ಮತ್ತು ದೇವಸ್ಥಾನಗಳಲ್ಲಿಯ 3,500 ಸಾಕುಆನೆಗಳು ಸೇರಿದಂತೆ ದೇಶದಲ್ಲಿಂದು 25,000ಕ್ಕೂ ಅಧಿಕ ಆನೆಗಳಿವೆ ಎಂದು ವರದಿ ಹೇಳಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications