ಕೃಷ್ಣ ಜನ್ಮಾಷ್ಟಮಿ : ಕೋಮು ಗಲಭೆಗೆ 8 ಗಾಯ
ರಾಂಚಿ,
ಸೆ. 2 : ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಸಂದರ್ಭ ನಡೆದ ಕೋಮು ಗಲಭೆಯಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಎಂಟು ಜನರಿಗೆ ಗಾಯಗಳಾಗಿರುವ ಘಟನೆ ಇಲ್ಲಿನ ಹಿಂದ್ ಪರಾ ಪ್ರದೇಶದಲ್ಲಿ ನಡೆದಿದೆ. id="toptextpromo">ಧ್ವನಿವರ್ಧಕ
ವಿಷಯವಾಗಿ ಎರಡೂ ಕೋಮಿನ ಜನರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡೂ ಗಂಪಿನವರು ಪರಸ್ಪರ ಕಲ್ಲು ತೂರಾಟದಲ್ಲಿ ತೊಡಗಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ಮಿತಿ ಮೀರಿತು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಸೇವಾ ಸದನ ಮತ್ತು ರಾಜೇಂದ್ರ ವೈದ್ಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. id='are-slot-1' class='oiad oi-axt oiadv'> id='top-searched-articles'>ರಾಂಚಿ
ವಲಯದ ಪೊಲೀಸ್ ಆಯುಕ್ತ ರೇಜಾ ದುಂದುಂಗಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲಾಗುತ್ತಿದ್ದು, ಪರಿಸ್ಥಿತಿ ಕೈ ಮೀರದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.











Click it and Unblock the Notifications