ವೈದ್ಯ ಕಾಲೇಜು ಹಗರಣದಲ್ಲಿ ಸಚಿವರ ಪುತ್ರ ಭಾಗಿ

ಹಾಸನದ ವೈದ್ಯಕೀಯ ಕಾಲೇಜು ನೇಮಕಾತಿ ಹಗರಣದ ರಹಸ್ಯವನ್ನು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಬಿಚ್ಚಿಟ್ಟ ಅವರು, ನೇಮಕಾತಿಯಲ್ಲಿ ಹಣ ಕಳೆದುಕೊಂಡ ನೌಕರರ ಅಳಲನ್ನು ಬಹಿರಂಗಪಡಿಸಿದರು. ಅವ್ಯವಹಾರಕ್ಕೆ ಕಾರಣರಾಗಿರುವ ವೈದ್ಯಕೀಯ ಸಚಿವ ರಾಮಚಂದ್ರಗೌಡರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಿ, ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಮುಖ್ಯಮಂತ್ರಿಯನ್ನು ಅವರು ಆಗ್ರಹಿಸಿದ್ದಾರೆ.
ಈ ನೇಮಕಾತಿ ಹಗರಣದಲ್ಲಿ ಸಚಿವರ ಪುತ್ರ ಸಪ್ತಗಿರಿಗೌಡ ಕೂಡಾ ಭಾಗಿಯಾಗಿದ್ದಾರೆ. ಅವರ ವಿರುದ್ಧ ದೂರು ಪಡೆಯಲು ಪೊಲೀಸರು ನಿರಾಕರಿಸಿದ್ದು, ಇಂತಹ ದೊಡ್ಡ ಹಗರಣವನ್ನು ಮುಚ್ಚಿಹಾಕಲು ವ್ಯವಸ್ಥಿತ ಸಂಚು ನಡೆದಿದೆ. ಹಣ ನೀಡಿದರೂ ಕೂಡಾ ನೇಮಕ ಆಗದವರು ಅವ್ಯವಹಾರದ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ದೂರಿನಲ್ಲಿ ಸಚಿವ ರಾಮಚಂದ್ರಗೌಡರ ಪುತ್ರ ಸಪ್ತಗಿರಿ ಗೌಡರ ಹೆಸರಿತ್ತು ಎಂದು ರೇವಣ್ಣ ವಿವರಿಸಿದ್ದಾರೆ.
ನೇಮಕಾತಿ ಸಂಬಂಧಿಸಿದಂತೆ ಉದ್ಯೋಗಾಕಾಂಕ್ಷಿಗಳು ಕಾಲೇಜಿಗೆ ಸಂಬಂಧಪಟ್ಟವರಿಗೆ ನೀಡಿದ ಹಣ, ಚೆಕ್ಕುಗಳು, ಪಡೆದ ಹಣವನ್ನು ಹಿಂದಿರುಗಿಸುತ್ತಿರುವ ವಿಡಿಯೊ, ಈ ಕುರಿತು ಮೊಬೈಲ್ನಲ್ಲಿ ನಡೆದ ಸಂಭಾಷಣೆಯ ದಾಖಲೆ ಸೇರಿದಂತೆ ಹಲವು ಮಹತ್ವದ ವಿವರಗಳನ್ನು ರೇವಣ್ಣ ಎಳೆಎಳೆಯಾಗಿ ಬಿಚ್ಚಿಟ್ಟರು. ಅವ್ಯವಹಾರ ನಡೆದಿರುವುದಕ್ಕೆ ಎಲ್ಲ ರೀತಿಯ ದಾಖಲೆಗಳಿದ್ದರೂ, ಅದನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕುವ ಕಾರ್ಯ ನಡೆಯುತ್ತಿದೆ ಎಂದು ಆರೋಪಿಸಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications