ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ರಮ ಗಣಿಯಲ್ಲಿ ಧರಂ, ಖರ್ಗೆ ಪಾತ್ರ

By Mrutyunjaya Kalmat
|
Google Oneindia Kannada News

Yeddyurappa
ಗುಲ್ಬರ್ಗಾ, ಸೆ. 5 : ಅಕ್ರಮ ಗಣಿಗಾರಿಕೆಯಲ್ಲಿ ಕೇಂದ್ರದ ಸಚಿವರು, ರಾಜ್ಯದ ಮಾಜಿ ಸಚಿವರು ಭಾಗಿಯಾಗಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ಕುರಿತು ಮುಂದಿನ ಎರಡು ದಿನಗಳೊಳಗೆ ಶ್ವೇತಪತ್ರ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಗುಲ್ಬರ್ಗ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಪರ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಅಕ್ರಮ ಗಣಿಗಾರಿಕೆಯ ವಿರುದ್ಧ ಸರಕಾರ ಕ್ರಮಕೈಗೊಂಡಿದೆ. ಈಗಾಗಲೇ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ 57 ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಿ, 11 ಮಂದಿಯನ್ನು ಬಂಧಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಧರ್ಮ ಸಿಂಗ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 37 ಕಂಪನಿಗಳಿಗೆ ಗಣಿಗಾರಿಕೆ ನಡೆಸಲು ಅನುಮತಿ ನೀಡಿದ್ದಾರೆ. ಅಲ್ಲದೆ, ಪಟ್ಟಾ ಜಮೀನಿನಲ್ಲಿಯೂ ಗಣಿಗಾರಿಕೆಗೆ ಅವಕಾಶ ನೀಡಿ, ರಾಜ್ಯದ ಬೊಕ್ಕಸಕ್ಕೆ ಸುಮಾರು 23.22 ಕೋಟಿ ರುಪಾಯಿಗಳಷ್ಟು ನಷ್ಟ ಉಂಟು ಮಾಡಿದ್ದಾರೆ. ಕುಮಾರಸ್ವಾಮಿ ಅವಧಿಯಲ್ಲಿ 3468 ಹೆಕ್ಟೇರ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು 22 ಸಂಸ್ಥೆಗಳಿಗೆ ಪ ವಾನಿಗೆಯನ್ನು ನೀಡಿದ್ದಾರೆ ಎಂದು ಪ್ರತಿ ಆರೋಪ ಮಾಡಿದರು.

ಧರಂ-ಖರ್ಗೆ ಗೆದ್ದು ತೋರಿಸಲಿ : ಯಡಿಯೂರಪ್ಪ ಗುಲ್ಬರ್ಗ ದಕ್ಷಿಣ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಹೈದರಾಬಾದ್ ಕರ್ನಾಟಕದ ಹಕ್ಕ-ಬುಕ್ಕರಂತಿರುವ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ಧರಂಸಿಂಗ್ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ತಾಕತ್ತು ಇದೆಯೇ ? 40 ವರ್ಷಗಳ ಕಾಲ ಹೈದರಾಬಾದ್ ಕರ್ನಾಟಕವನ್ನು ಆಳಿದ ಇವರಿಬ್ಬರು ಈ ಭಾಗದ ಜನತೆಗೆ ಏನನ್ನೂ ಮಾಡಿದ್ದಾರೆ. ಅಧಿಕಾರಾವಧಿಯಲ್ಲಿ ಏನನ್ನೂ ಮಾಡದ ಇವರು, ಈಗ ಮತಕ್ಕಾಗಿ ಜನರ ಮುಂದೆ ಹೋಗುತ್ತಿದ್ದಾರೆ. ಆದರೆ ಜನತೆ ಇವರನ್ನು ನಂಬುದಿಲ್ಲ. ಇವರ ಬಣ್ಣ ಈಗಾಗಲೇ ಬಯಲಾಗಿದೆ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X