ರಾಮಚಂದ್ರಗೌಡರಿಗೆ ಹೈಕೋರ್ಟ್ ಛೀಮಾರಿ
ಬೆಂಗಳೂರು,
ಸೆ. 7 : ಹಾಸನ ಮತ್ತು ಮೈಸೂರು ವೈದ್ಯಕೀಯ ಕಾಲೇಜುಗಳ ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ನಡೆದಿರುವ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಸರಕಾರ ನೇಮಕಾತಿಯನ್ನೇ ಅಸಿಂಧುಗೊಳಿಸಿದ್ದರೂ ಸಂಬಂಧಪಟ್ಟ ಇಲಾಖೆಯ ಸಚಿವರು ಇನ್ನೂ ಸಚಿವ ಸ್ಥಾನದಲ್ಲೇ ಉಳಿದಿದ್ದಾರೆಯೇ ಎಂದು ಹೈಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದೆ. id="toptextpromo">ಅವ್ಯವಹಾರ
ನಡೆದಿದೆ ಎಂಬ ಆರೋಪದ ಮೇಲೆ ಏಕಾಏಕಿ ಸರಕಾರ ಬೋಧಕೇತರ ಸಿಬ್ಬಂದಿ ನೇಮಕಾತಿಯನ್ನು ಅಸಿಂಧುಗೊಳಿಸಿರುವುದನ್ನು ಪ್ರಶ್ನಿಸಿ ಹಾಸನ ಹಾಗೂ ಮೈಸೂರು ವೈದ್ಯಕೀಯ ಕಾಲೇಜುಗಳ ಬೋಧಕೇತರ ಸಿಬ್ಬಂದಿ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾ.ರಾಮಮೋಹನರೆಡ್ಡಿ ಅವರು ಅಶ್ಚರ್ಯ ವ್ಯಕ್ತಪಡಿಸಿದರು. id='are-slot-1' class='oiad oi-axt oiadv'> id='top-searched-articles'>ಕಾಲೇಜು
ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ ಸಚಿವರು ರಾಜ್ಯ ಸಂಪುಟದಲ್ಲೂ ಇದ್ದಾರೆ. ಅಕ್ರಮ ನಡೆದಿದೆ ಎಂದು ಒಪ್ಪಿ ಸರಕಾರವೇ ನೇಮಕಾತಿಯನ್ನು ಅಸಿಂಧುಗೊಳಿಸಿದೆ. ಹಾಗಾದರೆ ಸಚಿವರು ಇದನ್ನು ಪರೋಕ್ಷವಾಗಿ ಒಪ್ಪಿಕೊಂಡಂತಲ್ಲವೇ? ಇಲಾಖೆಯ ಜವಾಬ್ದಾರಿ ಹೊತ್ತಿರುವ ಸಚಿವರು ಇನ್ನೂ ಸಚಿವರಾಗಿ ಉಳಿಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಇದೇ ಗುರುವಾರದೊಳಗೆ(ಸೆ.9) ಪ್ರಮಾಣಪತ್ರ ಸಲ್ಲಿಸುವ ಮೂಲಕ ಈ ಬಗ್ಗೆ ಉತ್ತರಿಸಬೇಕು ಎಂದು ಸರಕಾರಕ್ಕೆ ಸೂಚನೆ ನೀಡಿದ್ದಾರೆ.











Click it and Unblock the Notifications