ರಾಮಚಂದ್ರಗೌಡ ಪ್ರಮಾಣಪತ್ರ ಸಲ್ಲಿಕೆ
ಬೆಂಗಳೂರು,
ಸೆ. 8 : ಹಾಸನ ಹಾಗೂ ಮೈಸೂರು ಸರಕಾರಿ ವೈದ್ಯಕೀಯ ಆಸ್ಪತ್ರೆಗಳ ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. id="toptextpromo">ಬೋಧಕೇತರ
ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘಿಸಲಾಗಿದೆ ಎಂದು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೇಮಕಾತಿಯನ್ನು ರದ್ದುಪಡಿಸಿದ್ದರು. ಆದರೆ, ವೈದ್ಯಕೀಯ ಸಚಿವ ರಾಮಚಂದ್ರಗೌಡ ಮಾತ್ರ, ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ ಎಂದು ಪ್ರಮಾಣಪತ್ರ ಸಲ್ಲಿಸಿದ್ದು ಎಲ್ಲರೂ ಅಚ್ಚರಿ ವ್ಯಕ್ತಪಡಿಸುವಂತಾಗಿದೆ. id='are-slot-1' class='oiad oi-axt oiadv'> id='top-searched-articles'>ಆಸ್ಪತ್ರೆಗಳ
ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರೂ ಆಗಿರುವ ಸಚಿವರು ಇನ್ನೂ ಸಚಿವರಾಗಿ ಮುಂದುವರೆದಿದ್ದಾರೆಯೇ ಎಂದು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಸೂಚಿಸಿತ್ತು. ಹಗರಣದಲ್ಲಿ ಸಿಲುಕಿರುವ ರಾಮಚಂದ್ರಗೌಡ ಅವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ.











Click it and Unblock the Notifications