ಹಾಲಪ್ಪರಿಗೆ ಸಚಿವ ಸ್ಥಾನ ನೀಡಿ: ಬೇಳೂರು ಗೋಪಾಲಕೃಷ್ಣ

Belur Gopalakrishna
ಬೆಂಗಳೂರು, ಸೆ.14: ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿರುವುದು ನಿಜ ಆದರೆ, ಸಚಿವ ಸ್ಥಾನಕ್ಕಾಗಿ ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡುವುದಿಲ್ಲ. ನಾನು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಈಶ್ವರಪ್ಪರಿಗೆ ನಿಷ್ಠ ಎಂದು ಶಾಸಕ ಬೇಳೂರು ಗೋಪಾಲ ಕೃಷ್ಣ ಸ್ಪಷ್ಟಣೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಚಿವ ಸ್ಥಾನ ನೀಡದಿದ್ದರೆ 'ನನ್ನ ದಾರಿ ನೋಡಿಕೊಳ್ಳಬೇಕಾಗುತ್ತದೆ' ಎಂದು ತಾನು ಹೇಳಿಲ್ಲ. ಆದರೆ, ಮಾಧ್ಯಮಗಳು ತನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಮಾಹಿತಿ ನೀಡುವುದಾಗಿ ತಿಳಿಸಿದರು.

ಎಲ್ಲಾ ಈಡಿಗ ಸಮುದಾಯದ ಒಳಿತಿಗಾಗಿ: ರಾಜ್ಯದ ಶಿವಮೊಗ್ಗ, ಕಾರವಾರ, ಉಡುಪಿ, ಮಂಗ ಳೂರು ಹಾಗೂ ಚಿಕ್ಕಮಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಈಡಿಗರಿದ್ದಾರೆ. ಗಣನೀಯ ಸಂಖ್ಯೆಯಲ್ಲಿರುವ ಈಡಿಗ ಸಮುದಾಯದವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಸಮಾಜದ ಬೇಡಿಕೆ. ಈಡಿಗ ಸಮುದಾಯ ಕೂಡ ಬಿಜೆಪಿಗೆ ಬೆಂಬಲ ನೀಡುತ್ತಿದೆ.

ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪರ ವಿರುದ್ಧ ತಾನು ಎರಡು ಬಾರಿ ಗೆಲುವು ಸಾಧಿಸಿದ್ದು, ಈಡಿಗ ಸಮಾಜದ ಪ್ರಮುಖ ವ್ಯಕ್ತಿ. ಆದುದರಿಂದ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದೇನೆ ಎಂದು ಬೇಳೂರು ವಿವರಿಸಿದರು.

ಈಡಿಗ ಸಮಾಜದ ವ್ಯಕ್ತಿಯೊಬ್ಬರಿಗೆ ಸಚಿವ ಸಂಪು ಟಕ್ಕೆ ಸೇರಿಕೊಂಡರೆ, ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷ ಬಲವರ್ಧನೆಗೆ ಅದು ಸಹಕಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಒತ್ತಾಯಿಸಿದ್ದೇನೆ. ಈಡಿಗ ಸಮುದಾಯಕ್ಕೆ ಸ್ಥಾನ ನೀಡಬೇಕು ಎಂದು ಮತ್ತೊಮ್ಮೆ ಆಗ್ರಹಿಸಿದ ಬೇಳೂರು ಗೋಪಾಲ ಕೃಷ್ಣ, ಮಾಜಿ ಸಚಿವ ಹಾಲಪ್ಪರಿಗೆ ಸಚಿವ ಸ್ಥಾನ ನೀಡಿದರೂ ಸಂತೋಷ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಚೀನಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿಂತಿರುಗಿದ ನಂತರ ಪಕ್ಷದ ಹಿರಿಯರ ಜೊತೆ ಉನ್ನತ ಮಟ್ಟದ ಚರ್ಚೆ ನಡೆಸಲಿದ್ದಾರೆ.ನಂತರ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆ ಕಾರ್ಯಕ್ಕೆ ಮುಕ್ತಿ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+