ಸುಪ್ರೀಂ ನ್ಯಾಯಮೂರ್ತಿಗಳು ಭ್ರಷ್ಟರಂತೆ! ಶಾಂತಿಭೂಷಣ್
ನವದೆಹಲಿ,
ಸೆ. 17 : ಭಾರತದ 16 ಮುಖ್ಯ ನ್ಯಾಯಮೂರ್ತಿಗಳಲ್ಲಿ ಕನಿಷ್ಠ 8 ಮಂದಿ ಭ್ರಷ್ಟರು ಎಂದು ಮಾಜಿ ಕಾನೂನು ಸಚಿವ ಶಾಂತಿಭೂಷಣ್ ಗಂಭೀರ ಆಪಾದನೆ ಮಾಡಿದ್ದಾರೆ. ಆರು ಮಂದಿ ಮುಖ್ಯ ನ್ಯಾಯಮೂರ್ತಿಗಳು ಪ್ರಾಮಾಣಿಕರು, ಇನ್ನುಳಿದಂತೆ ಇಬ್ಬರು ನ್ಯಾಯಮೂರ್ತಿಗಳ ಕುರಿತು ಅವರು ಅಭಿಪ್ರಾಯ ವ್ಯಕ್ತಪಡಿಸಲು ನಿರಾಕರಿಸಿದರು ಎಂದು ಸುದ್ದಿ ವಾಹಿನಿಯೊಂದು ವರದಿ ಮಾಡಿದೆ. id="toptextpromo">ಎಂಟು
ಮಂದಿ ಭ್ರಷ್ಟ ನ್ಯಾಯಮೂರ್ತಿಗಳ ಪಟ್ಟಿಯನ್ನು ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವುದಾಗಿ ವರದಿಯಾಗಿದೆ. ಸುಪ್ರೀಂ ಕೋರ್ಟ್ ನಲ್ಲಿರುವ ಭ್ರಷ್ಟ ನ್ಯಾಯಮೂರ್ತಿಗಳ ಕುರಿತು ಪತ್ರಿಕೆಯೊಂದರಲ್ಲಿ ಭೂಷಣ್ ಲೇಖನವೊಂದನ್ನು ಬರೆದಿದ್ದರು. ಆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿತ್ತು. ಇದರಿಂದ ಅವರು ಸುಪ್ರೀಂ ಕೋರ್ಟ್‌ಗೆ ಈ ಕುರಿತು ಮಾಹಿತಿ ನೀಡಿದ್ದಾರೆ. id='are-slot-1' class='oiad oi-axt oiadv'> id='top-searched-articles'>ವಿಷಯಕ್ಕೆ
ಸಂಬಂಧಿಸಿ ಸುಪ್ರೀಂ ಕೋರ್ಟ್ ಜಾರಿಗೊಳಿಸಿದ್ದ ನೋಟಿಸೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಶಾಂತಿಭೂಷಣ್, ತಾನು ಪ್ರತಿಪಾದಿಸಿದ್ದ ಭ್ರಷ್ಟ ಮುಖ್ಯ ನ್ಯಾಯಮೂರ್ತಿಗಳ ಕುರಿತು ನ್ಯಾಯಾಲಯಕ್ಕೆ ವಿವರ ನೀಡಿದ್ದಾರೆ. ಆ ಪ್ರಕಾರ ಸುಪ್ರೀಂ ಕೋರ್ಟ್‌ನ 16 ಮುಖ್ಯ ನ್ಯಾಯಮೂರ್ತಿಗಳಲ್ಲಿ 8 ಮಂದಿ ಭ್ರಷ್ಟರು ಎಂದು ಅವರು ತಿಳಿಸಿದ್ದು, ಭ್ರಷ್ಟ ಮುಖ್ಯ ನ್ಯಾಯಮೂರ್ತಿಗಳ ಪಟ್ಟಿಯನ್ನೂ ನೀಡಿದ್ದಾರೆ. ಶಾಂತಿಭೂಷಣ್ 1977ರಿಂದ 1979ರವರೆಗೆ ಮೊರಾರ್ಜಿ ದೇಸಾಯಿ ಸರಕಾರದಲ್ಲಿ ಕಾನೂನು ಸಚಿವರಾಗಿದ್ದರು.











Click it and Unblock the Notifications