ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಪ್ರೀಂ ನ್ಯಾಯಮೂರ್ತಿಗಳು ಭ್ರಷ್ಟರಂತೆ! ಶಾಂತಿಭೂಷಣ್

By Mrutyunjaya Kalmat
|
Google Oneindia Kannada News

Supreme Court
ನವದೆಹಲಿ, ಸೆ. 17 : ಭಾರತದ 16 ಮುಖ್ಯ ನ್ಯಾಯಮೂರ್ತಿಗಳಲ್ಲಿ ಕನಿಷ್ಠ 8 ಮಂದಿ ಭ್ರಷ್ಟರು ಎಂದು ಮಾಜಿ ಕಾನೂನು ಸಚಿವ ಶಾಂತಿಭೂಷಣ್ ಗಂಭೀರ ಆಪಾದನೆ ಮಾಡಿದ್ದಾರೆ. ಆರು ಮಂದಿ ಮುಖ್ಯ ನ್ಯಾಯಮೂರ್ತಿಗಳು ಪ್ರಾಮಾಣಿಕರು, ಇನ್ನುಳಿದಂತೆ ಇಬ್ಬರು ನ್ಯಾಯಮೂರ್ತಿಗಳ ಕುರಿತು ಅವರು ಅಭಿಪ್ರಾಯ ವ್ಯಕ್ತಪಡಿಸಲು ನಿರಾಕರಿಸಿದರು ಎಂದು ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ಎಂಟು ಮಂದಿ ಭ್ರಷ್ಟ ನ್ಯಾಯಮೂರ್ತಿಗಳ ಪಟ್ಟಿಯನ್ನು ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವುದಾಗಿ ವರದಿಯಾಗಿದೆ. ಸುಪ್ರೀಂ ಕೋರ್ಟ್‌ ನಲ್ಲಿರುವ ಭ್ರಷ್ಟ ನ್ಯಾಯಮೂರ್ತಿಗಳ ಕುರಿತು ಪತ್ರಿಕೆಯೊಂದರಲ್ಲಿ ಭೂಷಣ್ ಲೇಖನವೊಂದನ್ನು ಬರೆದಿದ್ದರು. ಆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿತ್ತು. ಇದರಿಂದ ಅವರು ಸುಪ್ರೀಂ ಕೋರ್ಟ್‌ಗೆ ಈ ಕುರಿತು ಮಾಹಿತಿ ನೀಡಿದ್ದಾರೆ.

ವಿಷಯಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಜಾರಿಗೊಳಿಸಿದ್ದ ನೋಟಿಸೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಶಾಂತಿಭೂಷಣ್, ತಾನು ಪ್ರತಿಪಾದಿಸಿದ್ದ ಭ್ರಷ್ಟ ಮುಖ್ಯ ನ್ಯಾಯಮೂರ್ತಿಗಳ ಕುರಿತು ನ್ಯಾಯಾಲಯಕ್ಕೆ ವಿವರ ನೀಡಿದ್ದಾರೆ. ಆ ಪ್ರಕಾರ ಸುಪ್ರೀಂ ಕೋರ್ಟ್‌ನ 16 ಮುಖ್ಯ ನ್ಯಾಯಮೂರ್ತಿಗಳಲ್ಲಿ 8 ಮಂದಿ ಭ್ರಷ್ಟರು ಎಂದು ಅವರು ತಿಳಿಸಿದ್ದು, ಭ್ರಷ್ಟ ಮುಖ್ಯ ನ್ಯಾಯಮೂರ್ತಿಗಳ ಪಟ್ಟಿಯನ್ನೂ ನೀಡಿದ್ದಾರೆ. ಶಾಂತಿಭೂಷಣ್ 1977ರಿಂದ 1979ರವರೆಗೆ ಮೊರಾರ್ಜಿ ದೇಸಾಯಿ ಸರಕಾರದಲ್ಲಿ ಕಾನೂನು ಸಚಿವರಾಗಿದ್ದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X