ರೈಲ್ವೆ ನಿಲ್ದಾಣದಿಂದ ಮೆಜೆಸ್ಟಿಕ್ಗೆ ಉಚಿತ ಬಸ್ ಸೇವೆ

ರೈಲ್ವೆ ನಿಲ್ದಾಣದಿಂದ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸರಕು, ಸರಂಜಾಮುಗಳನ್ನು ಸಾಗಿಸಲು ಪರದಾಡುತ್ತಿದ್ದ ಸಾವಿರಾರು ಪ್ರಯಾಣಿಕರು ಬಿಎಂಟಿಸಿಯ ಈ ಹೊಸ ಸೇವೆಯಿಂದ ಅನುಕೂಲವಾಗಲಿದೆ. ಯಶವಂತಪುರ ರೈಲ್ವೆ ನಿಲ್ದಾಣದಿಂದ ಯಶವಂಪುರ ಬಸ್ ನಿಲ್ದಾಣಕ್ಕೂ ಇದೇ ರೀತಿಯ ಸೇವೆಯನ್ನು ಆರಂಭಿಸಲಾಗಿದೆ.
ಮಿನಿ ಬಸ್ ಸೇವೆಯನ್ನು ಉದ್ಘಾಟಿಸಿದ ಸಾರಿಗೆ ಸಚಿವ ಆರ್ ಅಶೋಕ್ ಮಾತನಾಡುತ್ತಾ, ಸಿಟಿ ರೈಲ್ವೆ ನಿಲ್ದಾಣದಿಂದ ಕೇವಲ ಅರ್ಧ ಕಿ.ಮೀ ದೂರದಲ್ಲಿರುವ ಕೆಂಪೇಗೌಡಾ ಬಸ್ ನಿಲ್ದಾಣಕ್ಕೆ ಲಗೇಜು ಹಿಡಿದು ಬರಬೇಕಾದರೆ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಆಟೋ ರಿಕ್ಷಾಗಳಲ್ಲಿ ಬರಬೇಕಾದರೆ ರು.20 ಆಗುತ್ತದೆ. ಪ್ರಯಾಣಿಕರ ಉತ್ತಮ ಸೌಲಭ್ಯ ನೀಡುವ ನಿಟ್ಟಿನಲ್ಲಿ ನಾವು ಉಚಿತ ಸೇವೆಯನ್ನು ಪ್ರಾರಂಭಿಸಿದ್ದೇವೆ ಎಂದರು.
ಪ್ರತಿ ಹತ್ತು ನಿಮಿಷಕ್ಕೊಮ್ಮೆ ಈ ಮಿನಿ ಬಸ್ ಗಳು ರೈಲ್ವೆ ನಿಲ್ದಾಣ ಮತ್ತು ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಂಚರಿಸುತ್ತಿರುತ್ತವೆ. ಈಗಾಗಲೆ ಈ ಸೇವೆಯನ್ನು 2,500ಕ್ಕೂ ಅಧಿಕ ಪ್ರಯಾಣಿಕರು ಬಳಸಿಕೊಳ್ಳುತ್ತಿದ್ದಾರೆ. ಮುಂಜಾನೆ 4.30ರಿಂದ ರಾತ್ರಿ 11 ಗಂಟೆಯ ತನಕ ಈ ಮಿನಿ ಬಸ್ ಸೇವೆ ಲಭ್ಯ ಎಂದು ಆರ್ ಅಶೋಕ್ ತಿಳಿಸಿದರು. ಶಿವಾಜಿನಗರ ಬಸ್ ನಿಲ್ದಾಣದಿಂದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೂ ಈ ಸೇವೆಯನ್ನು ವಿಸ್ತರಿಸುವ ಯೋಜನೆ ಇದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications