ಉಪಚುನಾವಣೆಯ ಗೆಲುವಿಗೆ ಸಿದ್ದು ಕಾರಣ
ಬಳ್ಳಾರಿ,
ಸೆ. 19: ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಮೂಲಕ ನಮ್ಮ ಮೇಲೆ ಇಲ್ಲದ ಸಲ್ಲದ ಆರೋಪಗಳನ್ನು ಮಾಡುತ್ತಿರುವ ವಿರೋಧ ಪಕ್ಷಗಳಿಗೆ ಸಮಾಧಾನದ ಉತ್ತರ ನೀಡಿದ್ದೇವೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. id="toptextpromo">ಸಿರುಗುಪ್ಪದ
ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ 'ನಿಮ್ಮಿಂದಿಗೆ ನಾವು" ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕಾಂಗ್ರೆಸ್ ಪಕ್ಷದ ಮುಖಂಡರು ಬೆಂಗಳೂರಿನಿಂದ ಬಳ್ಳಾರಿಗೆ ಮಾಡಿದ ಪಾದಯಾತ್ರೆಗೆ ಮತದಾರರು ಹೇಗೆ ಸ್ಪಂದಿಸಿದ್ದಾರೆಂದು ಉಪ ಚುನಾವಣೆಯ ಫಲಿತಾಂಶದಿಂದ ಗೊತ್ತಾಗಿದೆ ಎಂದು ಅವರು ವ್ಯಂಗ್ಯವಾಡಿದರು. id='are-slot-1' class='oiad oi-axt oiadv'> id='top-searched-articles'>ಜನರ
ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸುವುದೇ 'ನಿಮ್ಮೆಂದಿಗೆ ನಾವು" ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಪ್ರತಿ ತಿಂಗಳ 17ರಂದು ಸಿರುಗುಪ್ಪದಲ್ಲಿ ಈ ಕಾರ್ಯಕ್ರಮವು ನಡೆಯುತ್ತಿದೆ. ಮುಂದಿನ ತಿಂಗಳು ನಡೆಯುವ ಕಾರ್ಯಕ್ರಮದ ಒಳಗೆ ಸಮಸ್ಯೆಗಳನ್ನು ಬಗೆಹರಿಸುವುದಾಗಿ ರೆಡ್ಡಿ ಭರವಸೆ ನೀಡಿದರು.











Click it and Unblock the Notifications